August 25, 2026
kranthikidi.com
ತಾಜಾಸುದ್ದಿರಾಜ್ಯ

ರಸ್ತೆ ಬದಿ ನಿಂತಿದ್ದ, ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ಸಾವು..!

ಚಿಕ್ಕಮಗಳೂರು : ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.

ಮೃತರನ್ನ ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಹಾಗೂ ಗಂಭೀರ ಗಾಯಗೊಂಡಿರುವ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಎಂದು ಗುರುತಿಸಲಾಗಿದೆ. ಮೃತರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾಗಿದ್ದು, ಐವರು ಒಂದೇ ಗ್ರಾಮದ ಸ್ನೇಹಿತರು ಎಂದು ತಿಳಿದು ಬಂದಿದೆ.

ಮೃತರು ಮತ್ತು ಗಾಯಾಳುಗಳು ತುಮಕೂರಿನಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪಿದ್ದಾರೆ.

ಅಪಘಾತದ ಶಬ್ದ ಕೇಳಿ ಸ್ಥಳೀಯರು ಕೂಡಲೇ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ನಿಲ್ಲದ ಮಳೆ; ದಕ್ಷಿಣ ಕನ್ನಡದ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ..!

Related posts

ಗುಬ್ಬಿ, ಕುಣಿಗಲ್ ಬರಪೀಡಿತ ಪ್ರದೇಶಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ..!

kknewskannada1987@gmail.com

ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಖಚಿತ..!

Kalpana Editor

ಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನ..!

Kalpana Editor