August 26, 2026
kranthikidi.com
ತಾಜಾಸುದ್ದಿರಾಜ್ಯ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30 ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಒದಗಿಸಿದೆ. ಇದನ್ನೂ ಓದಿ : ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ; ಸಿಎಂ ಡಿಕೆ ಶಿವಕುಮಾರ್ ಭರವಸೆ..!

Related posts

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಉಪಕರಣಗಳು ಹಾಗೂ ಸಿಬ್ಬಂದಿ ಸನ್ನದ್ಧತಾ ಕಾರ್ಯಕ್ರಮ..!

Kalpana Editor

ನಮ್ಮ ಮೆಟ್ರೋ ತಾಂತ್ರಿಕ ದೋಷ, ಮಾದಾವರ-ತಲಘಟ್ಟಪುರ ರೈಲು ಸಂಚಾರ ವಿಳಂಬ..!

Kalpana Editor

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು..!

Kalpana Editor