21.5 C
ಬೆಂಗಳೂರು
October 13, 2026
kranthikidi.com
ತಾಜಾಸುದ್ದಿಸಿನಿಮಾ

‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಲಾಂಚ್​ಗೆ ಬಂದ್ರು ಲೇಡೀಸ್  ಆ್ಯಂಡ್ ಲೇಡೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿರುವ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್‌ನ ಗ್ಲಾಮರಸ್ ನಟಿ ಕಿಯಾರಾ ಅಡ್ವಾಣಿ ಹಾಗೂ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಜೊತೆಯಾಗಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಿಯಾರಾ ಅಡ್ವಾಣಿ ಡೆನಿಮ್ ಡ್ರೆಸ್‌ನಲ್ಲಿ ಅತ್ಯಂತ ಸ್ಟೈಲಿಶ್ ಆಗಿ ಕಂಗೊಳಿಸಿದರೆ, ನಿರ್ದೇಶಕಿ ಗೀತು ಮೋಹನ್‌ದಾಸ್ ಕಪ್ಪು ಬಣ್ಣದ ಔಟ್‌ಫಿಟ್‌ನಲ್ಲಿ ಕ್ಲಾಸಿ ಲುಕ್ ನೀಡಿದರು. ಇಬ್ಬರೂ ಒಟ್ಟಿಗೆ ಹೆಜ್ಜೆ ಹಾಕುತ್ತಾ, ನಗುಮುಖದಿಂದ ಕ್ಯಾಮೆರಾಗಳಿಗೆ ಪೋಸ್ ನೀಡಿದರು. ತದನಂತರ ಒಂದೇ ಕಾರಿನಲ್ಲಿ ಹೋಟೆಲ್​ಗೆ ಪಯಣ ಬೆಳೆಸಿದರು.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ ಪ್ರಮುಖ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಗೀತು ಮೋಹನ್‌ದಾಸ್ ಅವರ ನಿರ್ದೇಶನದ ವೈಖರಿ ಹಾಗೂ ಮಾಸ್ ಅವತಾರದಲ್ಲಿ ಯಶ್ ಅವರ ಲುಕ್ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದೆ. ಇದನ್ನೂ ಓದಿ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪ ಖಂಡಿಸಿ; ಕಾಂಗ್ರೆಸ್ ಪ್ರತಿಭಟನೆ..!

Related posts

ಬಿಡದಿ ಸ್ಯಾಟಲೈಟ್ ಟೌನ್‌ಶಿಪ್ ನೆಪದಲ್ಲಿ ರೈತರ ಜಮೀನು ಲೂಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಕಹಳೆ ಊದಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ

Kalpana Editor

ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ, ಒಬಿಸಿಗೆ ಕಾಂಗ್ರೆಸ್​​ ಬಂಪರ್..!

Kalpana Editor

ಜೈಲಲ್ಲಿರೋ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ವಿಜಯಲಕ್ಷ್ಮಿ

Kalpana Editor