August 25, 2026
kranthikidi.com
ತಾಜಾಸುದ್ದಿರಾಜ್ಯ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪ ಖಂಡಿಸಿ; ಕಾಂಗ್ರೆಸ್ ಪ್ರತಿಭಟನೆ..!

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಿದ್ದಾರೆ. ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೆಪಿಸಿಸಿ ಪ್ರಧಾನ, ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ “ಮಹಿಳೆಯೊಬ್ಬರು ಮಾಡಿರುವ ಅತ್ಯಂತ ಗಂಭೀರ ಆರೋಪಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡವಿಲ್ಲದೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥ ಆರೋಪಿಯನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಹ್ಲಾದ್ ಜೋಶಿ ಅವರ ಸಾರ್ವಜನಿಕ ನಿಲುವುಗಳ ಬಗ್ಗೆ ಮಹಿಳಾ ವಿರೋಧಿ ಎಂಬ ಟೀಕೆಗಳು ಈಗಾಗಲೇ ಕೇಳಿಬಂದಿವೆ. ಇದೀಗ ಅವರ ಸಹೋದರ ಗೋಪಾಲ್ ಜೋಶಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ರವರ ಹೆಸರಿನಲ್ಲಿ ಎರಡು ಕೋಟಿ ಹಣ ವಂಚನೆ ಮಾಡಿದ್ದು ಈಗಾಗಲೇ ಬಹಿರಂಗವಾಗಿದೆ.

ಈಗ ಮತ್ತೇ ಈತನ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಂದಿವೆ ಇಂತಹ ಆರೋಪಗಳನ್ನು ರಾಜಕೀಯ ಬಣ್ಣದಲ್ಲಿ ನೋಡುವ ಬದಲು, ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಮಹಿಳೆಯರ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಆರೋಪಿತ ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸರ್ಕಾರ ಹಾಗೂ ಪೋಲಿಸ್ ಇಲಾಖೆ ಸ್ಪಷ್ಟವಾಗಿ ರವಾನಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಪ್ರತಿಭಟನ ಸಂಧರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಮನೋಹರ್ ಕಾಂಗ್ರೆಸ್ ಮುಖಂಡರುಗಳಾದ ಜಿ‌.ಪ್ರಕಾಶ್ , ಹೇಮರಾಜ್, ಪುಟ್ಟರಾಜು ಕುಶಾಲ್ ಹರುವೇಗೌಡ, ರಂಜೀತ್ ಕುಮಾರ್, ಆನಂದ್, ಮಾಧವಹನೂರು, ಪ್ರವೀಣ್ ರಾವ್, ಒಬಳೇಶ್ , ಪವನ್ ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿದರು. ಇದನ್ನೂ ಓದಿ : ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

Related posts

ಕೂಡಲೇ ಬರ ಘೋಷಿಸದಿದ್ದರೆ, ಚಲೋ ಹೊಲ ಗದ್ದೆ ಧರಣಿ ಆರಂಭ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ..!

Kalpana Editor

ಸಂಪುಟ ವಿಸ್ತರಣೆ ಪ್ರಾಥಮಿಕ ಚರ್ಚೆ; ಪ್ರತ್ಯೇಕ ಪಟ್ಟಿ ಕಳುಹಿಸಲು ಸಿಎಂ, ಮಾಜಿ ಸಿಎಂಗೆ ಸೂಚನೆ..!

Kalpana Editor

ಇಂದು ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ – ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆ..!

Kalpana Editor