August 25, 2026
kranthikidi.com
ತಾಜಾಸುದ್ದಿರಾಜ್ಯ

ಬಹುದಿನಗಳ ಕನಸು ನನಸು; ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್

ಹಾಸನ : ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವತ್ತ ಹೆಜ್ಜೆ ಇಟ್ಟಿದೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವು, ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಯಶಸ್ವಿಯಾಗಿ ಆರಂಭಗೊಂಡಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿದ ಶಿರಾಡಿಘಾಟ್ ಮಾರ್ಗದಲ್ಲಿ ಈ ರೈಲು ಸಂಚರಿಸುವ ಮೂಲಕ ಇತಿಹಾಸ ಬರೆದಿದೆ.

ಸಕಲೇಶಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲಿಗೆ ಸ್ಥಳೀಯ ಶಾಸಕರಾದ ಸಿಮೆಂಟ್ ಮಂಜು ಅವರು ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಭಾಗದಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಶಾಸಕರು ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ನಿರಂತರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸಕಲೇಶಪುರ ಮಾರ್ಗದವರೆಗಿನ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ಈಗ ಟ್ರಯಲ್ ರನ್ ಪ್ರಕ್ರಿಯೆ ಚಾಲನೆಯಲ್ಲಿದೆ.

ಈ ವಿಶೇಷ ವಂದೇ ಭಾರತ್ ರೈಲು 20 ಬೋಗಿಗಳನ್ನು ಹೊಂದಿದ್ದು, ಏಕಕಾಲಕ್ಕೆ 1,080 ಪ್ರಯಾಣಿಕರು ಅತ್ಯಂತ ಸುಖಕರವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಘಾಟ್ ಪ್ರದೇಶದ ಕಡಿದಾದ ಇಳಿಜಾರಿನಲ್ಲಿ ಸುರಕ್ಷಿತವಾಗಿ ಚಲಿಸಲು ಈ ರೈಲಿನಲ್ಲಿ ಅತ್ಯಾಧುನಿಕ ‘ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್’ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಬೆಂಗಳೂರು ಹಾಗೂ ಕರಾವಳಿ ಭಾಗದ ಪ್ರಯಾಣಿಕರಿಗೆ ಇನ್ನು ಮುಂದೆ ಅತ್ಯಂತ ವೇಗದ ಮತ್ತು ಐಷಾರಾಮಿ ಸಾರಿಗೆ ವ್ಯವಸ್ಥೆ ಸಿಗಲಿದೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ಬೆನ್ನಲ್ಲೇ, ಶೀಘ್ರದಲ್ಲೇ ಈ ರೈಲು ಸಾರ್ವಜನಿಕರ ಸೇವೆಗೆ ಮುಕ್ತವಾಗುವ ಸಾಧ್ಯತೆ ಇದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿದಿನ ನಿಯಮಿತವಾಗಿ ಸಂಚಾರ ಆರಂಭಿಸಲಿ ಎಂಬುದು ಹಾಸನ ಹಾಗೂ ಕರಾವಳಿ ಜಿಲ್ಲೆಗಳ ಪ್ರಯಾಣಿಕರ ತೀವ್ರ ಆಶಯವಾಗಿದೆ. ಇದನ್ನೂ ಓದಿ : ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ; ಗಣಿಗ ರವಿಕುಮಾರ್

Related posts

ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ; ಇಂಡಿಗೋ ವಿಮಾನದಲ್ಲಿ ಚೀಟಿ ಪತ್ತೆ..!

Kalpana Editor

RSS ನೋಂದಣಿ ಬಗ್ಗೆ ಮೋಹನ್ ಭಾಗವತ್​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

Kalpana Editor

ಮೀಟರ್​​​ ರೀಡಿಂಗ್​​ ಇಲ್ಲ – ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ..!

Kalpana Editor