22.1 C
ಬೆಂಗಳೂರು
September 21, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಇಂದು ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

ಉಡುಪಿ : ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಇಂದು ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ಇನ್ನಷ್ಟೇ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ : ಪೇಪರ್‌ ಲೀಕ್‌ಗೆ 10 ವರ್ಷ ಜೈಲು, 10 ಕೋಟಿ ದಂಡ – ಸಂಸತ್ತಿನಲ್ಲಿ ಬಿಲ್‌ ಪಾಸ್‌; ನಮೋ ವಿಡಿಯೋ ಸಂದೇಶ..!

Related posts

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor

ಕೊಲಂಬಿಯಾದಲ್ಲಿ ತೀವ್ರತೆಯ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 132ಕ್ಕೆ ಏರಿಕೆ..!

kknewskannada1987@gmail.com

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ; ಅಂತಿಮ ದರ್ಶನಕ್ಕೆ ವ್ಯವಸ್ಥೆ..!

Kalpana Editor