August 1, 2026
kranthikidi.com
ತಾಜಾಸುದ್ದಿಸಿನಿಮಾ

ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ನಟಿ ತ್ರಿಷಾ

ತಮಿಳುನಾಡು ಸಿಎಂ ಹಾಗೂ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದು, ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಸಿಎಂ ವಿಜಯ್ ಅವರು ತಮ್ಮ ಅಧಿಕಾರಿಗಳೊಂದಿಗೆ ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಇನ್ನು ಕಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಸಹ ಮೊದಲ ದಿನವೇ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಶೇಷವೆಂದರೆ, ನಟಿ ತ್ರಿಷಾ ಕೃಷ್ಣನ್ ಅವರು ‘ಜನ ನಾಯಗನ್’ ಚಿತ್ರದ ಮೊದಲ ದಿನದ ಮೊದಲ ಶೋ ಅನ್ನು ಮಿಸ್ ಮಾಡಿಕೊಳ್ಳಲಿಲ್ಲ. ಅವರು ಚೆನ್ನೈನ ರೋಹಿಣಿ ಥಿಯೇಟರ್‌ನಲ್ಲಿ ತಮ್ಮ ತಾಯಿ ಮತ್ತು ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಿದರು. ಸಿನಿಮಾ ಮುಗಿದ ಬಳಿಕ ಅವರು ಸಂತೋಷದಿಂದ ನಗುತ್ತಾ ಥಿಯೇಟರ್‌ನಿಂದ ಹೊರಬರುತ್ತಿರುವ ವೀಡಿಯೊಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಚಿತ್ರ ವೀಕ್ಷಿಸಿದ ಬಳಿಕ ತ್ರಿಷಾ ತಮ್ಮ ಸ್ನೇಹಿತರ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ‘ಒನ್ ಲಾಸ್ಟ್ ಟೈಮ್.. ಒನ್ ಲಾಸ್ಟ್ ಡ್ಯಾನ್ಸ್’ (ಕೊನೆಯ ಬಾರಿ.. ಕೊನೆಯ ನೃತ್ಯ) ಎಂದು ಬರೆದುಕೊಂಡಿದ್ದಾರೆ. ಥಿಯೇಟರ್‌ನಲ್ಲಿದ್ದ ಭಾರಿ ಜನಸಂದಣಿ ಮತ್ತು ಕ್ರೇಜ್ ಬಗ್ಗೆ ಅವರ ಸ್ನೇಹಿತೆ ಪ್ರಿಯಾ ಶ್ಯಾಮ್ ಪೋಸ್ಟ್ ಮಾಡಿದ್ದು, ‘ನಾನು ತ್ರಿಷಾ ಮತ್ತು ನಿರುಪಮಾ ಜೊತೆ ಹೇಗೋ ಬದುಕುಳಿದೆ’ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಈ ಸಿನಿಮಾದಲ್ಲಿ ವಿಜಯ್‌ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದರೆ, ಮಮಿತಾ ಬೈಜು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಾಬಿ ಡಿಯೋಲ್ ಅವರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಇದಕ್ಕೂ ಮುನ್ನ ವಿಜಯ್ ಮತ್ತು ತ್ರಿಷಾ ‘ಲಿಯೋ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ತೆರೆಮೇಲೆ ಈ ಜೋಡಿಗೆ ಭಾರಿ ಕ್ರೇಜ್ ಇದೆ. ಸದ್ಯ ನಟಿ ತ್ರಿಷಾ ತಮಿಳು ಹಾಗೂ ತೆಲುಗಿನಲ್ಲಿ ಬ್ಯಾಕ್-ಟು-ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿದ್ದಾರೆ. ತ್ರಿಷಾ ಹಾಗೂ ವಿಜಯ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಇದನ್ನೂ ಓದಿ : ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲು..!

Related posts

ಪ್ರವಾಸಿಗರಿಗೆ ಎಚ್ಚರಿಕೆ; ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ಓಡಾಟ..!

Kalpana Editor

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Kalpana Editor

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ದಿಗ್ಗಜರ ದಾಖಲೆಗಳೇ ಧೂಳೀಪಟ..!

Kalpana Editor