22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

ಬೆಂಗಳೂರು : ಬಹುನಿರೀಕ್ಷಿತ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್​​ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​​ ಹಾಗೂ ವಿಧಾನ ಪರಿಷತ್​​ ಸಭಾಪತಿ ಮತ್ತು ಉಪ ಸಭಾಪತಿಗಳ ಹೆಸರನ್ನೂ ಎಐಸಿಸಿ ಅಂತಿಮಗೊಳಿಸಿದೆ.

ವಿಧಾನಸಭೆ ಸ್ಪೀಕರ್​ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್​​ ನೇಮಕವಾಗಿದ್ದರೆ, ಡೆಪ್ಯೂಟಿ ಸ್ಪೀಕರ್​​ ಆಗಿ ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರ ಸ್ವೀಕರಿಸಲಿದ್ದಾರೆ. ಉಳಿದಂತೆ ವಿಧಾನಪರಿಷತ್​ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಿಸಲಾಗಿದೆ.

ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸ್ಪೀಕರ್​​ ಆಗಿದ್ದ ಯು.ಟಿ. ಖಾದರ್​​ ಅದಾಗಲೇ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡೆಪ್ಯೂಟಿ ಸ್ಪೀಕರ್​ ಆಗಿದ್ದ ರುದ್ರಪ್ಪ ಲಮಾಣಿ ಕೂಡ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ, ತಮ್ಮ ಹಾಲಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿರೋದಾಗಿ ತಿಳಿಸಿದ್ದಾರೆ.

ಪರಿಷತ್​​ ಸಭಾಪತಿಯಾಗಿ ಹಾಲಿ ಬಸವರಾಜ ಹೊರಟ್ಟಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆಯಾದರೂ ಎಐಸಿಸಿಯ ಹೊಸ ನಿರ್ಧಾರದಿಂದಾಗಿ ಅವರು ಹುದ್ದೆಗೆ ರಾಜೀನಾಮೆ ನೀಡುವುದು ಬಹುತೇಕ ದಟ್ಟವಾಗಿದೆ. ಸ್ಥಾನ ತ್ಯಜಿಸುವಂತೆ ರಾಜ್ಯ ಸರ್ಕಾರ ಅವರ ಮೇಲೆ ಒತ್ತಡ ಹೇರಿರುವ ಬಗ್ಗೆ ಈ ಹಿಂದೆ ವದಂತಿಗಳು ಹರಿದಾಡಿದ್ದವಾದರೂ ಹೊರಟ್ಟಿ ಅದನ್ನು ನಿರಾಕರಿಸಿದ್ದರು. ಆದರೆ ಕಾಂಗ್ರೆಸ್​​ನ ಕೆಲ ನಾಯಕರು ಮಾತ್ರ ಬಿಜೆಪಿಯಿಂದ ಆಯ್ಕೆಯಾಗಿರುವ ಹೊರಟ್ಟಿಯವರು ಮೆಜಾರಿಟಿ ಇಲ್ಲದಿದ್ದಾಗ ರಾಜೀನಾಮೆ ಕೊಡುವುದು ಒಳ್ಳೆಯದು ಎಂದಿದ್ದರು.

ಬಿಜೆಪಿಯಿಂದ ಆಯ್ಕೆಯಾದವರನ್ನ ನಾವು ಒಪ್ಪಲು ಸಾಧ್ಯವಿಲ್ಲ. ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ತಮ್ಮ ಸ್ಥಾನಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಘೋಷಿಸಿದ್ದ ಕಾರಣ, ಖಾಲಿ ಇರುವ ಆ ಸ್ಥಾನಕ್ಕೂ ಉಮಾಶ್ರೀ ಅವರನ್ನು ನೇಮಿಸಲಾಗಿದೆ. ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ; ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ..!

Related posts

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ – ಪ್ರಿಯಾಂಕ್ ಖರ್ಗೆ

kknewskannada1987@gmail.com

ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ..!

Kalpana Editor

ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ – ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಡಿಕೆ ಶಿವಕುಮಾರ್‌

Kalpana Editor