29 C
ಬೆಂಗಳೂರು
September 20, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಮಂಜು ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿರುವ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮೇಲೆ ಎಫ್‌ಐಆರ್ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೆಸ್ಟೋ ಬಾರ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಹಾಗೂ ಬಿಲ್ ನೀಡಲು ನಿರಾಕರಿಸಿದ ನಂತರ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಜು.9ರ ರಾತ್ರಿ ರೆಸ್ಟೋ ಬಾರ್‌ಗೆ ಹೋಗಿದ್ದ, ಮಂಜು ಅಲಿಯಾಸ್ ಅಮುಕು ಡುಮಕು ಊಟ ಮತ್ತು ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ ಹೊರಗೆ ಹೋಗ್ತಿದ್ದಾಗ ತಡೆದು ಪ್ರಶ್ನೆ ಮಾಡಿದ್ದ ಮಹಿಳಾ ಸಿಬ್ಬಂದಿಗೆ ಸೆಲ್ಫಿ ಪೋಟೋ ಕೊಡುವಂತೆ ಕೇಳಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದ್ದ, ಪಬ್ ಮ್ಯಾನೇಜರ್‌ ಮೇಲೆ ಹಲ್ಲೆಗೆ ಯತ್ನಿಸಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ. ಅಮುಕು ಡುಮುಕು ಹಾಗೂ ಮತ್ತವರ ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಗಳಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಇದನ್ನೂ ಓದಿ : ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ ಮಾಡಿದೆ; ಇರಾನ್‌ ಆರೋಪ..!

Related posts

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ – ತೀವ್ರ ಹುಡುಕಾಟ..!

Kalpana Editor

ಯುವತಿಯ ವೈದ್ಯಕೀಯ ವೆಚ್ಚ ಭರಿಸಲು ಮುಂದಾದ ರ‍್ಯಾಪಿಡೋ..!

kknewskannada1987@gmail.com

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್…!

Kalpana Editor