August 26, 2026
kranthikidi.com
ತಾಜಾಸುದ್ದಿರಾಜ್ಯ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಅರೆಸ್ಟ್‌..!

ಹಾಸನ : ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ.

ನನಗೆ ಜೀವ ಬೆದರಿಕೆ ಇದೆ, ಅಬ್ದುಲ್ ರಜಾಕ್ ವಿರುದ್ಧ ನಾನು ದೂರು ಕೊಟ್ಟಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪುನೀತ್ ಕೆರೆಹಳ್ಳಿ ಬಂಧಿಸುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ : ರಸ್ತೆಯಲ್ಲೇ ಇ-ರಿಕ್ಷಾ ಹ್ಯಾಕ್ – ವಿಡಿಯೋ ವೈರಲ್‌ ಬೆನ್ನಲ್ಲೇ, ಚೀನಿ ಆ್ಯಪ್‌ ಬ್ಯಾನ್..!

Related posts

ದೇಶವನ್ನು ಬಲಪಡಿಸುವಲ್ಲಿ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ: ಪ್ರಧಾನಿ ಮೋದಿ

Kalpana Editor

ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ..!

Kalpana Editor

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯಿದೆ – ಡಿಕೆಶಿ

Kalpana Editor