24.1 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಅಡ್ಡ ಮತದಾನ ಆರೋಪ; ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಹೊರಟ ಶಾಸಕ

ಹಾಸನ : ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್‌.ಕೆ.ಸುರೇಶ್‌ ಅವರು ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಆಣೆ-ಪ್ರಮಾಣ ಮಾಡಲು ನೂರಾರು ಬೆಂಬಲಿಗರು, ಕಾರ್ಯಕರ್ತರ ಜೊತೆ ಶಾಸಕ ಸುರೇಶ್‌ ಹೊರಟಿಸಿದ್ದಾರೆ. ಇದಕ್ಕೂ ಮುನ್ನ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ಆವರಣದಲ್ಲಿರುವ ಬಲಿ ಕಲ್ಲಿನ ಮೇಲೆ ಆಣೆ ಮಾಡಿದರು.

ನಾನು ಅಡ್ಡ ಮತದಾನ ಮಾಡಿಲ್ಲ ಎಂದು ಶಾಸಕ ಹೆಚ್‌.ಕೆ.ಸುರೇಶ್‌ ಆಣೆ ಮಾಡಿದರು. ನಂತರ ಕರ್ಪೂರ ಹಚ್ಚಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು. ಆರೋಪ ಬಂದ ಕೂಡಲೇ ಧರ್ಮಸ್ಥಳದ ಮಂಜುನಾಥಸ್ವಾಮಿ ಮೇಲೆ ಆಣೆ ಮಾಡುತ್ತೇನೆ ಎಂದು ಶಾಸಕ ಸುರೇಶ್‌ ಹೇಳಿದ್ದರು. ಮಾತಿನಂತೆ ಇಂದು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲಿದ್ದಾರೆ. ಇದನ್ನೂ ಓದಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ..!

Related posts

ಉಪವಾಸ ಅಂತ್ಯಗೊಳಿಸುವ ಯೋಜನೆಯನ್ನು ರಾಹುಲ್ ನಿರ್ಲಕ್ಷಿಸಿದ್ರು – ವಾಂಗ್ಚುಕ್ ಬೇಸರ..!

kknewskannada1987@gmail.com

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ; ಮೋದಿಗೆ ಆಹ್ವಾನ ನೀಡಿದ ಇರಾನ್‌ ಅಧ್ಯಕ್ಷ

Kalpana Editor

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ; ಸ್ಯಾಂಡಲ್‌ವುಡ್ ಸ್ಟಾರ್ಸ್‌ಗೆ ಸಿಐಡಿ ಶಾಕ್..!

Kalpana Editor