20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮತ್ತೊಂದು ವಿಡಿಯೋ ರಿಲೀಸ್​​ – ಹೆಚ್‌ಡಿ ಕುಮಾರಸ್ವಾಮಿ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ ಕ್ಷೇತ್ರಕ್ಕೆ ಸಂಬಂಧಿಸಿದ ಎಸ್​ಐಆರ್​​ ಪ್ರಕ್ರಿಯೆಯ ಅಕ್ರಮಗಳ ಕುರಿತು ವಿಡಿಯೋ ರಿಲೀಸ್​​ ಮಾಡಿದ್ದು, ಶಾಸಕ ಎಸ್​.ಟಿ.ಸೋಮಶೇಖರ್​​ ಫೋಟೋ ಇರುವ ಪುಸ್ತಕಗಳನ್ನು ಬಿಎಲ್​​ಒಗಳು ಹಿಡಿದಿರೋದು ಇದರಲ್ಲಿ ಕಂಡುಬಂದಿದೆ.

ಯಶವಂತಪುರ ಕ್ಷೇತ್ರದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ಫೋಟೋ ಇರುವ ಪುಸ್ತಕ ಬಳಸಿ ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ ಎಂದವರು ಆರೋಪಿಸಿದ್ದಾರೆ

ಮತದಾರರ ಹುಂಡಿಯೇ ಲೂಟಿ – ಸರ್ಕಾರದ ಗುಲಾಮರಾಗಿ ಕೆಲಸ ಮಾಡಲು‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ. ಆ ಮೂಲಕ ಸಂವಿಧಾನವನ್ನ ಬುಡಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನನಗೆ ರಾಜ್ಯದ ಹಲವು ಭಾಗಗಳಿಂದ ಕರೆ ಬರುತ್ತಿದ್ದು, ಕೇಂದ್ರದ ಚುನಾವಣಾ ಆಯುಕ್ತರ ಭೇಟಿಗೆ ಸಮಯ ಕೇಳುತ್ತೇನೆ. ರಾಜ್ಯ ಚುನಾವಣಾ ಆಯುಕ್ತರನ್ನ ಇಂದು ಭೇಟಿ ಮಾಡುತ್ತೇವೆ. ರಾಜ್ಯ ಸರ್ಕಾರ ಯಾವ ಸಾಧನೆ ಮಾಡಲು ಹೊರಟಿದೆ ಎಂದವರು ಪ್ರಶ್ನಿಸಿದ್ದಾರೆ.

ಕಚೇರಿಯಲ್ಲಿ ಕುಳಿತು ಹೇಳಿದ್ರೆ ಆಗುತ್ತಾ? – ಇನ್ನು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್​​ ಆದೇಶದ ಬಗ್ಗೆಯೂ ಪ್ರತಕ್ರಿಯಿಸಿರುವ ಹೆಚ್​​ಡಿಕೆ, ಅನ್ಬುಕುಮಾರ್ ಕಚೇರಿಯಲ್ಲಿ ಕುಳಿತು ಹೇಳಿದ್ರೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ನೀಡಿರುವ ದೂರಿನ ಬಗ್ಗೆ ಏನು ಕ್ರಮ ಆಗಿದೆ? ಬೆಳಿಗ್ಗೆಯಿಂದ ಆಯುಕ್ತರು ಕಚೇರಿಗೇ ಬಂದಿಲ್ಲ ಎಂದವರು ಹೇಳಿದ್ದಾರೆ. ಇದನ್ನೂ ಓದಿ : ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Related posts

ರೇವಣ್ಣ ಸಲಹೆಯಂತೆ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ ರೇವಣ್ಣ

Kalpana Editor

ಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು…!

Kalpana Editor

ಕಲ್ಲು ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ – ಸಿಎಂ ಡಿಕೆಶಿ

Kalpana Editor