26.5 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿರಾಜ್ಯ

ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್..!

ಮಡಿಕೇರಿ : ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್ ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್ ನುಂಗಿರಬಹುದೆಂದು ಶಂಕಿಸಲಾಗಿತ್ತು. ನಂತರ ಲ್ಯಾರಿಂಗೊಸ್ಕೋಪ್ ಪರೀಕ್ಷೆ ನಡೆಸಿದಾಗ ಮಗುವಿನ ಗಂಟಲಲ್ಲಿ ಎಲ್‌ಇಡಿ ಬಲ್ಬ್ ಸಿಲುಕಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಇಎನ್‌ಟಿ ತಜ್ಞೆ ಡಾ. ರಾಜಶ್ರಿ ಹಾಗೂ ಮಕ್ಕಳ ತಜ್ಞ ಡಾ. ಖುಶ್ವಂತ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸದೇ ಸುರಕ್ಷಿತವಾಗಿ ಬಲ್ಬ್ ಅನ್ನು ಹೊರತೆಗೆದಿದ್ದಾರೆ. ಆಟವಾಡುವ ಸಂದರ್ಭದಲ್ಲೇ ಮಗು ಬಲ್ಬ್ ನುಂಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ. ವೈದ್ಯರ ಸಮಯೋಚಿತ ಚಿಕಿತ್ಸೆ ಹಾಗೂ ಪೋಷಕರ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ. ಇದನ್ನೂ ಓದಿ : ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ; ಸಿಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ..!

Related posts

ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು..!

kknewskannada1987@gmail.com

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ; ಮೋದಿಗೆ ಆಹ್ವಾನ ನೀಡಿದ ಇರಾನ್‌ ಅಧ್ಯಕ್ಷ

Kalpana Editor

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಗೆ ಟ್ವಿಸ್ಟ್ – ಗೆಳೆಯನಿಂದಲೇ ಬಿಗ್ ಶಾಕ್..!

kknewskannada1987@gmail.com