ಬೆಂಗಳೂರು : ಉದ್ಯಮಿ ಆದಿಕೇಶವುಲು ಮೊಮ್ಮಗ ಮತ್ತೆ ಸುದ್ದಿಯಲ್ಲಿದ್ದಾರೆ. ಬೆಂಕಿಪೊಟ್ಟಣ ಇಟ್ಟಿಲ್ಲ ಅಂತಾ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ ಪ್ರಕೃತಿ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಅಪಾರ್ಟ್ಮೆಂಟ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಎಂಬವರ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಆದಿಕೇಶವುಲು ಮೊಮ್ಮಗ ಸಿಗರೇಟ್ ಸೇದಲು ಬೆಂಕಿಪಟ್ಟಣ ಕೇಳಿದ್ದರು. ಇಲ್ಲ ಎಂದಿದ್ದಕ್ಕೆ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಪಾರ್ಕಿಂಗ್ ಲಾಟ್‌ನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿರುವ ಆರೋಪವೂ ಕೇಳಿಬಂದಿದ್ದು, ಈ ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಗೆ ಸೆಕ್ಯುರಿಟಿ ಗಾರ್ಡ್, ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಎನ್‌ಸಿಆರ್ ಅಷ್ಟೇ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಡಿಸಿಪಿಗೆ ದೂರು ಕೊಡಲಾಗಿದೆ. ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್..!
