21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಪ್ರಯಾಣಿಕರ ಗಮನಕ್ಕೆ; ನಾಳೆ ಮುಂಜಾನೆ ಬೆಳಿಗ್ಗೆಯಿಂದಲೇ ಮೆಟ್ರೋ ಸೇವೆ ಆರಂಭ..!

ಬೆಂಗಳೂರು : ಬಿಡಿಎ ಸಹಯೋಗದಲ್ಲಿ ನಾಳೆ ಅಂದರೆ ಜೂನ್​​ 27ರಂದು ಬೆಂಗಳೂರಿನ ಹಲವೆಡೆ ಸಸಿ ನೆಡುವ ಹಾಗೂ ವಾಕ್‌ಥಾನ್​​ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಿನಜಾವ 4 ಗಂಟೆಯಿಂದಲೇ ನಗರದಲ್ಲಿ ನಮ್ಮ ಮೆಟ್ರೋ ಸೇವೆ ಆರಂಭಗೊಳ್ಳಲಿದೆ.

ಈ ವಿಶೇಷ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ. ಬಿಎಂಆರ್​ಸಿಎಲ್​ ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊಡಿಸಿದೆ. ಬಿಡಿಎ ವತಿಯಿಂದ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಜೂನ್ 27ರ ಶನಿವಾರ ವಿಶೇಷ ಮುಂಜಾನೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ.

ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲಾ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4 ಗಂಟೆಗೆ ರೈಲು ಸಂಚಾರವನ್ನು ಆರಂಭಿಸುತ್ತಿದೆ. ಇದು ಸಾಮಾನ್ಯ ಶನಿವಾರದ ಬೆಳಿಗ್ಗೆ 5 ಗಂಟೆಯ ಸೇವೆಗಿಂತ ಒಂದು ಗಂಟೆ ಮುಂಚಿತವಾಗಿ ರೈಲು ಸಂಚಾರ ಆರಂಭವಾಗಲಿದೆ.

ಸಾರ್ವಜನಿಕರು ಈ ವಿಶೇಷ ಮುಂಜಾನೆ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಂಡು, ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಹಾಗೂ ಸುರಕ್ಷಿತ, ಸುಗಮ ಮತ್ತು ಪರಿಸರ ಸ್ನೇಹಿ ಮೆಟ್ರೋ ಸೇವೆಯನ್ನು ಬಳಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ಇನ್ನು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಕೋರಲಾಗಿದೆ. ಇದನ್ನೂ ಓದಿ : ಫಾರ್ಮ್‌ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!

Related posts

ಬಾಸ್‌ ಸಿನಿಮಾಗೆ ಗ್ರೀನ್‌ ಸಿಗ್ನಲ್‌ – ಹೈಕೋರ್ಟ್‌ನಲ್ಲಿ ದರ್ಶನ್‌ ಪತ್ನಿಗೆ ಸೋಲು..!

Kalpana Editor

ರಾಜ್ಯ ಬಿಜೆಪಿ ಗೊಂದಲಗಳಿಗೆ 2 ತಿಂಗಳಲ್ಲಿ ತೆರೆ; ಶಾಸಕಸುರೇಶ್ ಗೌಡ

Kalpana Editor

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ..!

Kalpana Editor