August 26, 2026
kranthikidi.com
ತಾಜಾಸುದ್ದಿರಾಜ್ಯ

ಸಾರಿಗೆ ಬಸ್ ನಿಲ್ದಾಣ ಬಳಿ ಕರಡಿ ಪ್ರತ್ಯಕ್ಷ – ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಚಿತ್ರದುರ್ಗ : ಸಾರಿಗೆ ಬಸ್ ನಿಲ್ದಾಣದ ಬಳಿ ಕರಡಿ ಪ್ರತ್ಯಕ್ಷವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಸಾರಿಗೆ ಬಸ್ ನಿಲ್ದಾಣ ಬಳಿ ಕರಡಿ ಓಡಾಟ ನಡೆಸಿದ್ದು, ಆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನನಿಬಿಡ ಸ್ಥಳವಾದ ಬಸ್ ನಿಲ್ದಾಣದಲ್ಲಿ ತಡರಾತ್ರಿ ಕರಡಿ ಓಡಾಟ ನಡೆಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆದರೆ ನಗರದ ಮಧ್ಯದಲ್ಲಿರುವ ಬಸ್ ನಿಲ್ದಾಣದ ಬಳಿ ಕರಡಿ ಸಂಚರಿಸಿರೋದು ಸಾರ್ವಜನಿಕರಲ್ಲಿ ಅಚ್ಚರಿ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದು, ಹೀಗಾಗಿ ಸಂಬಂಧಪಟ್ಟವರು ಕೂಡಲೇ ಕರಡಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಚಳ್ಳಕೆರೆ ಪಟ್ಟಣ ನಿವಾಸಿಗಳು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ – ಯು.ಟಿ ಖಾದರ್

Related posts

ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು, ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು

Kalpana Editor

ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ; ಫುಟ್‌ಪಾತ್ ಅತಿಕ್ರಮಣದಾರರಿಗೆ ಎಚ್ಚರಿಕೆ – ಕೃಷ್ಣಬೈರೇಗೌಡ

Kalpana Editor

ಶಿವರಾಜ್ ಕುಮಾರ್ ವ್ಯಕ್ತಿತ್ವ, ನಟನೆ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ

Kalpana Editor