24.4 C
ಬೆಂಗಳೂರು
October 5, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಬಿಜೆಪಿ ಶಾಸಕನ ಆಪ್ತನಿಗೆ ಚಾಕುವಿನಿಂದ ಇರಿತ..!

ಬೆಂಗಳೂರು : ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಆಪ್ತನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ರೆಡ್ಡಿ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜಯನಗರದ 9th ಬ್ಲಾಕ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಘಟನೆ ನಡೆದಿದೆ. ಹೊಟ್ಟೆ, ಎದೆ, ಬೆನ್ನಿಗೆ ಚಾಕುವಿನಿಂದ ಇರಿಯಲಾಗಿದೆ. 24 ನೇ ತಾರೀಕು ಸಂಜೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಸೋಮಶೇಖರ್ ರೆಡ್ಡಿ ವಾಟರ್ ಪ್ಲಾಂಟ್ ನಡೆಸುತ್ತಿದ್ದಾರೆ. ಯುವಕರ ಗುಂಪೊಂದು ವಾಟರ್ ಪ್ಲಾಂಟ್ ಬಳಿ ಬಂದಾಗ ಕಿರಿಕ್ ಆಗಿದೆ. ಮಾತಿಗೆ ಮಾತು ಬೆಳೆದು ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಟೋದಲ್ಲಿ ಮಾರಕಾಸ್ತ್ರಗಳ ಸಮೇತ ಬಂದಿದ್ದ ಐವರ ಗುಂಪು ರೆಡ್ಡಿ ಮೇಲೆ ದಾಳಿ ನಡೆಸಿದೆ. ಗಾಯಾಳವನ್ನು ಸ್ಥಳೀಯರು ತಕ್ಷಣ ‌ಆಸ್ಪತ್ರೆಗೆ ಸೇರಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿ, ಬಾಲು, ಪುಲಿ, ವಿಷ್ಣು, ಶಂಕರ್ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಬಂದು ದಾಳಿ ಮಾಡಿದ್ದಾರೆಂದು ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ : ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

Related posts

ಹಾಡು ನಿಲ್ಲಿಸಿದ ‘ಗಾನಕೋಗಿಲೆ’; ಖ್ಯಾತ ಗಾಯಕಿ ಎಸ್. ಜಾನಕಿ ನಿಧನ..!

Kalpana Editor

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು

Kalpana Editor

ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಡ್ಯಾಂಗಳು

Kalpana Editor