26.9 C
ಬೆಂಗಳೂರು
October 10, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ; ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧ ಪ್ರತಿಭಟನೆ – ಆರ್‌.ಅಶೋಕ

ಬೆಂಗಳೂರು : ಶುಕ್ರವಾರ ನಡೆಯಲಿರುವ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕರಿಸಲಾಗುವುದು. ಆದರೆ ಚುನಾವಣೆಯ ಬಳಿಕ ಪೀಠಕ್ಕೆ ಎಂದಿನಂತೆಯೇ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧದ ಪ್ರತಿಭಟನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆ ಶುಕ್ರವಾರ ನಡೆಯಲಿದೆ. ಸದನಕ್ಕೆ ಸಾರ್ವಭೌಮತ್ವ ಇದೆ ಹಾಗೂ ವಿಧಾನಸಭಾ ಸದಸ್ಯರಿಗೆ ಹಕ್ಕು ಇದೆ. ಆದರೆ ಕಾಂಗ್ರೆಸ್‌ ಪಕ್ಷ ಸಂವಿಧಾನ ಬಾಹಿರವಾಗಿ ತನ್ನ ಲೆಟರ್‌ಹೆಡ್‌ನಲ್ಲಿ ಆಯ್ಕೆ ಮಾಡಲಾಗುವ ಸಭಾಧ್ಯಕ್ಷರ ಹೆಸರನ್ನು ಉಲ್ಲೇಖ ಮಾಡಿದೆ. ಸದನದ ಸಾರ್ವಭೌಮತ್ವವನ್ನು ಕಸಿಯುವ ಕೆಲಸವನ್ನು ದೆಹಲಿಯ ನಕಲಿ ಗಾಂಧಿ ಕುಟುಂಬ ಮಾಡಿದೆ. ಪಕ್ಷದ ಪಟ್ಟಿಯಲ್ಲಿ ಸ್ಪೀಕರ್‌ ಹೆಸರನ್ನು ಪ್ರಕಟಿಸುವ ಹೊಸ ಸಂಪ್ರದಾಯವನ್ನು ಹುಟ್ಟುಹಾಕಲಾಗಿದೆ. ಸಭಾಧ್ಯಕ್ಷರು ಸದನದಿಂದ ಚುನಾಯಿತರಾಗಬೇಕಿದ್ದರೂ, ಪಕ್ಷದಿಂದಲೇ ಚುನಾಯಿತರನ್ನಾಗಿ ಮಾಡಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಎಂದರು.

ವಿಧಾನಪರಿಷತ್‌ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡುತ್ತೇನೆ ಎಂದಿದ್ದರೂ ಅವರ ಕಚೇರಿಗೆ ಶಾಸಕರು ನುಗ್ಗಿ ರಾಜೀನಾಮೆ ಪಡೆದಿದ್ದಾರೆ. ಇದು ಕೂಡ ಸಂವಿಧಾನಕ್ಕೆ ಮಾಡಿರುವ ಅಪಚಾರ. ಇಲ್ಲಿನ ಹೊಸ ಸಭಾಪತಿ ಹಾಗೂ ಉಪಸಭಾಪತಿಗಳ ಹೆಸರನ್ನು ಕೂಡ ಪಕ್ಷದ ಪಟ್ಟಿಯಲ್ಲಿ ತೋರಿಸಲಾಗಿದೆ. ಶಾಸಕ ಎ.ಎಸ್‌.ಪೊನ್ನಣ್ಣ ಅವರನ್ನು ಉಪ ಸಭಾಧ್ಯಕ್ಷ ಎಂದು ತೋರಿಸಲಾಗಿತ್ತು. ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದರಲ್ಲಿ ಯಾವುದು ಸರಿ ಎಂದು ತಿಳಿಸದೆ ಗೊಂದಲದ ಗೂಡು ಮಾಡಿದ್ದಾರೆ. ಇವೆಲ್ಲವೂ ಸದನದ ನೀತಿ ನಿಯಮಗಳನ್ನು ಮೀರಿದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದರು.

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಕಾಂಗ್ರೆಸ್‌ ಅಪಚಾರ ಮಾಡಿರುವುದರಿಂದ ವಿಧಾನಸಭಾಧ್ಯಕ್ಷರ ಆಯ್ಕೆಯ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕಾರ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ನಾವು ಭಾಗಿಯಾಗುವುದಿಲ್ಲ. ಆದರೆ ಚುನಾವಣೆಯ ನಂತರ ಮಾತ್ರ ಪೀಠಕ್ಕೆ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಪೀಠದ ವಿರುದ್ಧವಲ್ಲ, ಆದರೆ ಕಾಂಗ್ರೆಸ್‌ನ ಲೆಟರ್‌ಹೆಡ್‌ ಹಾಗೂ ಸರ್ವಾಧಿಕಾರದ ವಿರುದ್ಧ ಮಾಡುತ್ತಿರುವ ಪ್ರತಿಭಟನೆ ಎಂದರು. ಇದನ್ನೂ ಓದಿ : ‘ಜಂತರ್ ಮಂತರ್ ಪ್ರತಿಭಟನೆಯಲ್ಲಿ ಇದ್ದ ಬಹುತೇಕರು ಜೆನ್ ಜಿ ಅಲ್ಲ’ – ಕಂಗನಾ ರಣಾವತ್

Related posts

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ – ವಿ.ಸೋಮಣ್ಣ

Kalpana Editor

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ..!

Kalpana Editor

ಪಿಎಸ್ಐ ಅಕ್ರಮ; ಅಮಾನತ್ತಾದ ಅಮೃತ್ ಪೌಲ್ ವಿರುದ್ಧ ತನಿಖೆಗೆ ಆದೇಶ..!

Kalpana Editor