29 C
ಬೆಂಗಳೂರು
September 20, 2026
kranthikidi.com
ಉದ್ಯೋಗ

BSNL ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ..!

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ನೇರ ನೇಮಕಾತಿ ಯೋಜನೆಯಡಿ ಖಾಲಿ ಇರುವ ಜೂನಿಯರ್ ಟೆಲಿಕಾಂ ಅಧಿಕಾರಿ ಕೇಡರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಮತ್ತು ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವೃತ್ತವಾರು ಹಂಚಿಕೆ : ಈ ನೂತನ ಅಧಿಸೂಚನೆಯ ಅಡಿಯಲ್ಲಿ ದೇಶಾದ್ಯಂತ ಒಟ್ಟು 100 ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿವಿಧ ವಲಯಗಳ ಆಧಾರದ ಮೇಲೆ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಭಾರತದಾದ್ಯಂತ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ವಿಸ್ತರಣೆಯ ಭಾಗವಾಗಿ ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾಗುವ ವೃತ್ತಿಪರರಿಗೆ ಸಂಸ್ಥೆಯ ತಾಂತ್ರಿಕ ವಿಭಾಗಗಳನ್ನು ಮುನ್ನಡೆಸುವ ಜವಾಬ್ದಾರಿ ಸಿಗಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಸಡಿಲಿಕೆ ವಿವರ : ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ (B.E) / ಬಿ.ಟೆಕ್ (B.Tech) ಪದವಿ ಮುಗಿಸಿರಬೇಕು ಅಥವಾ ಎಂಎಸ್‌ಸಿ (M.Sc), ಎಂಟೆಕ್ (M.Tech) ಉತ್ತೀರ್ಣರಾಗಿರಬೇಕು. ಇನ್ನು ಅಭ್ಯರ್ಥಿಗಳ ವಯಸ್ಸು ಜುಲೈ 3, 2026 ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ, ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ವಿಕಲಚೇತನ (PwBD) ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ವಿಧಾನ : ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜುಲೈ 3, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕದ ಭಾಗವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 2,000ರೂ. ಪಾವತಿಸಬೇಕಾಗುತ್ತದೆ. ಅದೇ ರೀತಿ ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರಿಯಾಯಿತಿ ಇದ್ದು, ತಲಾ 1,000ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಲಿಖಿತ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ. ಪ್ರಮುಖವಾಗಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400 ರಿಂದ 40,500 ರೂ. ರ ಶ್ರೇಣಿಯಲ್ಲಿ ಆಕರ್ಷಕ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು : ಬಿಎಸ್‌ಎನ್‌ಎಲ್ ಜೆಟಿಒ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರ ಈ ಕೆಳಗಿನಂತಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: ಜೂನ್ 4, 2026, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 3, 2026
ಅರ್ಜಿ ಪರಿಷ್ಕರಣೆ ದಿನಾಂಕ: ಜುಲೈ 4 ರಿಂದ ಜುಲೈ 11, 2026, ಲಿಖಿತ ಪರೀಕ್ಷೆ ನಡೆಯುವ ಅಂದಾಜು ಸಮಯ: ಆಗಸ್ಟ್ 2026..,

Related posts

ಐಟಿಐ, 10ನೇ ತರಗತಿ ಪಾಸ್ ಆದವರಿಗೆ ರಕ್ಷಣಾ ಇಲಾಖೆಯಲ್ಲಿ ಉದ್ಯೋಗ..!

Kalpana Editor

ಕೆಪಿಎಸ್‌ಸಿ ನೇಮಕಾತಿ; 2024ನೇ ಸಾಲಿನ ಈ ಹುದ್ದೆಗಳಿಗೆ ಅರ್ಜಿ ಹಾಕಿರುವವರಿಗೆ ಮಹತ್ವದ ಸೂಚನೆ..!

Kalpana Editor

ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನೇರ ಸಂದರ್ಶನ..!

Kalpana Editor