29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟ ವಿಸ್ತರಣೆ; ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ – ಯತೀಂದ್ರ

ಬೀದರ್ : ಸಂಪುಟ ವಿಸ್ತರಣೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಆಗ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡುವುದು ಸಹಜ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೀದರ್‌ನಲ್ಲಿ ಮಾತನಾಡಿದ ಅವರು, ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಆ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ. ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ ಅವಕಾಶ ನೀಡುವ ಪ್ರಯತ್ನ ಮಾಡಲಾಗುತ್ತದೆ. ಹೀಗಾಗಿ ಕೆಲವರನ್ನು ಕೈಬಿಡಬೇಕಾಗುತ್ತದೆ. ಅದರಿಂದ ಸಣ್ಣಪುಟ್ಟ ಅಸಮಾಧಾನ ಆಗುವುದು ಸಹಜ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದ ವಿಚಾರವಾಗಿ ಮಾತನಾಡಿದ ಯತೀಂದ್ರ, ಮಹಿಳೆಯರಿಗೂ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಕೊನೆಯ ಕ್ಷಣದಲ್ಲಿ ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಗಾಯತ್ರಿ ಶಾಂತೇಗೌಡ ಅವರು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರನ್ನು ಪಟ್ಟಿಯಿಂದ ಯಾಕೆ ಕೈಬಿಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಮಾತ್ರ ಹೇಳಿದ್ದಾರೆ. ಕುರುಬ ಸಮುದಾಯದ ಇಬ್ಬರಿಗೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಗದಿರಬಹುದು. ಆದರೆ, ಅವರಿಗೆ ನೀಡಲು ಇನ್ನೂ ಹಲವು ನಿಗಮ-ಮಂಡಳಿ ಸೇರಿದಂತೆ ವಿವಿಧ ಸ್ಥಾನಮಾನಗಳಿವೆ. ಇರುವ 34 ಸಚಿವ ಸ್ಥಾನಗಳಲ್ಲೇ ಸಮುದಾಯ, ಪ್ರಾದೇಶಿಕ ಸಮತೋಲನ ಹಾಗೂ ಹೊಸಬರಿಗೂ ಅವಕಾಶ ಕಲ್ಪಿಸಬೇಕಾಗುತ್ತದೆ ಎಂದು ಹೇಳಿದರು. ಯಾವ ಸರ್ಕಾರಕ್ಕೂ ಶೇ.100ರಷ್ಟು ಪ್ರಾತಿನಿಧ್ಯ ನೀಡಲು ಸಾಧ್ಯವಿಲ್ಲ. ಕೆಲವರನ್ನು ಕೈಬಿಡಲೇಬೇಕಾಗುತ್ತದೆ. ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹೊಡೆತ ಬೀಳುವುದಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ : ಶಾಸಕರು ರಾಜೀನಾಮೆ ಕೊಟ್ಟರೆ, ನಿಮಿಷದಲ್ಲಿ ಅಂಗೀಕಾರ; ಸಿಎಂ ಡಿಕೆಶಿ

Related posts

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!

Kalpana Editor

ಬಿಡದಿ ಟೌನ್‌ಶಿಪ್ ಸರ್ವೆಗೆ ಬಂದವರಿಗೆ ಪೊರಕೆ ಪೂಜೆ, ಸ್ಥಳದಲ್ಲಿ ಉದ್ವಿಗ್ನತೆ – ಅಧಿಕಾರಿಗಳ ವಾಹನಕ್ಕೆ ಹಾನಿ, ರೈತರ ಆಕ್ರೋಶ..!

Kalpana Editor

ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ, ವೈದ್ಯೆ 5 ವರ್ಷ ಅಮಾನತು..!

Kalpana Editor