July 22, 2026
kranthikidi.com
ತಾಜಾಸುದ್ದಿರಾಜ್ಯ

ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿದ್ಯುತ್‌ ಕಂಬಕ್ಕೆ ಡಿಕ್ಕಿ, ತಪ್ಪಿದ ಅನಾಹುತ..!

ಬೆಂಗಳೂರು : ಟೆಸ್ಟ್ ಡ್ರೈವ್ ವೇಳೆ ಮಹಿಳೆ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟ್‌ಪಾತ್ ಮೇಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಯ್ಯನಪಾಳ್ಯ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟೆಸ್ಟ್ ಡ್ರೈವ್‌ಗಾಗಿ ಕೆಂಪು ಬಣ್ಣದ ಶಿಫ್ಟ್ ಡಿಸೈರ್ ಕಾರು ತೆಗೆದುಕೊಂಡಿದ್ದ ಮಹಿಳೆ ಚಾಲನೆ ಮಾಡುತ್ತಿದ್ದ ವೇಳೆ ಏಕಾಏಕಿ ಕಾರಿನ ನಿಯಂತ್ರಣ ತಪ್ಪಿದೆ.

ನಿಯಂತ್ರಣ ತಪ್ಪಿದ ಕಾರು ಫುಟ್‌ಪಾತ್ ಮೇಲೆ ಹತ್ತಿ ಅಲ್ಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಮಹಿಳೆ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೆ.ಆರ್.ಪುರಂ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ವಿರುದ್ಧ ನಿರ್ಲಕ್ಷ್ಯ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಕಾರು ಡಿಕ್ಕಿ ಹೊಡೆದ ಎಲೆಕ್ಟ್ರಿಕ್ ಕಂಬದ ಮುಂಭಾಗವೇ ಬಸ್ ನಿಲ್ದಾಣವಿತ್ತು. ಕಂಬ ಇರದೇ ಇದ್ದರೆ ಕಾರು ನೇರವಾಗಿ ಬಸ್ ನಿಲ್ದಾಣಕ್ಕೆ ನುಗ್ಗುವ ಸಾಧ್ಯತೆ ಇತ್ತು. ಹಗಲು ಹೊತ್ತಿನಲ್ಲಿ ನಡೆದ ಘಟನೆ ಆಗಿದ್ದರಿಂದ ಅಲ್ಲಿದ್ದ ಪ್ರಯಾಣಿಕರ ಜೀವಕ್ಕೂ ಅಪಾಯ ಎದುರಾಗಬಹುದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ : ಕೆಪಿಎಸ್‌ಸಿ ನೇಮಕಾತಿ ಅಕ್ರಮ; ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್..!

Related posts

ಮುಂಬೈಯಲ್ಲಿ ಭಾರೀ ಮಹಾ ಮಳೆಗೆ ಕೊಚ್ಚಿ ಹೋದ ಸಾವಿರಕ್ಕೂ ಹೆಚ್ಚು ಸಿಲಿಂಡರ್‌ಗಳು..!

Kalpana Editor

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ..!

Kalpana Editor

ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು..!

Kalpana Editor