21.1 C
ಬೆಂಗಳೂರು
October 13, 2026
kranthikidi.com
ತಾಜಾಸುದ್ದಿರಾಜ್ಯ

ನದಿಗೆ ಬಿದ್ದ ಕಾರು; ಬಂಡೆಯಿಂದಾಗಿ ಉಳಿದ ದಂಪತಿ ಜೀವ..!

ಚಿಕ್ಕಮಗಳೂರು : ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಕಾರೊಂದು ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ದಂಪತಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಭಸದಿಂದ ಹರಿಯುತ್ತಿದ್ದ, ನೀರಿನಲ್ಲಿ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ದಂಪತಿಯ ಜೀವ ಉಳಿದಿದೆ. ಬಂಡೆ ಅಡ್ಡ ಸಿಗದೇ ಇದ್ದಿದ್ದರೆ ಕಾರಿನ ಸಮೇತ ದಂಪತಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇನ್ನೂ ಕಾರು ನದಿಗೆ ಬೀಳುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ಕಾರಿಗೆ ಹಗ್ಗ ಕಟ್ಟಿ ಮೇಲೆಳೆದು ದಂಪತಿಯ ಪ್ರಾಣ ರಕ್ಷಿಸಿದ್ದಾರೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸೋಮಾವತಿ ನದಿಗೆ ತಡೆಗೋಡೆ ಇಲ್ಲ. ಈಗಾಗಲೇ 3-4 ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ : ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Related posts

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಅರ್ಜಿಗಳನ್ನು ಆಹ್ವಾನ..!

kknewskannada1987@gmail.com

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ; ಕೇಂದ್ರದ ನಡೆ ಖಂಡಿಸಿ, ಮೋದಿಗೆ ಪರಮೇಶ್ವರ್‌ ಪತ್ರ..!

Kalpana Editor

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ..!

Kalpana Editor