23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ. ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ತಗ್ಗಿದ ಹಿನ್ನೆಲೆ ನೀರಿನ ಪ್ರಮಾಣ ಸರಿದೂಗಿಸಲು ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಲು ನಿರ್ಧರಿಸಲಾಗಿದೆ.

ಸರ್ಕಾರದ ಆದೇಶ ಹಾಗೂ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಳೆದ ರಾತ್ರಿಯಿಂದಲೇ ನೀರು ಬಿಡುಗಡೆ ಕಾರ್ಯ ಆರಂಭಿಸಿದ್ದಾರೆ. ಜಲಾಶಯದ 80ಕ್ಕೂ ಹೆಚ್ಚು ಕ್ರಸ್ಟ್‌ ಗೇಟ್‌ಗಳ ಮೂಲಕ ಸುಮಾರು 3,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ : 9 ಯೋಧರಿಗೆ ಕೀರ್ತಿ ಚಕ್ರ ಸೇರಿ 78 ಜನರಿಗೆ ಶೌರ್ಯ ಪ್ರಶಸ್ತಿ ಘೋಷಣೆ..!

Related posts

ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆ; ಕರ್ನಾಟಕದಲ್ಲಿ ಎಲ್ಲಿ ಎಷ್ಟು ಮಳೆ..?!

Kalpana Editor

ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ..!

Kalpana Editor

ಚಿಕ್ಕಬಳ್ಳಾಪುರದಲ್ಲಿ ಟಾರ್ಗೆಟ್ ರಾಜಕಾರಣ: 9 ಜನರ ಬಂಧನ ಖಂಡಿಸಿ ನಿಖಿಲ್ ಕಿಡಿ

Kalpana Editor