July 22, 2026
kranthikidi.com
ತಾಜಾಸುದ್ದಿರಾಜ್ಯ

ಚೆನ್ನಮ್ಮ ನಿಧನ; ಇಂದು, ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ..!

ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆ ಇಂದು ಮತ್ತು ನಾಳೆ (ಜು.20) ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಾಳೆ (ಸೋಮವಾರ) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ಇಂದು ಹಾಗೂ ಸೋಮವಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಚೆನ್ನಮ್ಮ ವಿಧಿವಶರಾದ ಹಿನ್ನೆಲೆ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಶಾಸಕ ಸಿ.ಎನ್.ಬಾಲಕೃಷ್ಣ ಸ್ಥಳದಲ್ಲಿ ಮೊಕ್ಕಾಂ ಹೂಡಿ ಸಿದ್ಧತಾ ಕಾರ್ಯ ಪರಿಶೀಲಿಸುತ್ತಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಪೂಜಾ ಕಾರ್ಯಗಳು ನಡೆಯಲಿವೆ.

ಬಳಿಕ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಬಳಿಗೆ ಪಾರ್ಥಿವ ಶರೀರ ತರಲಾಗುತ್ತದೆ. ಕೆಲಕಾಲ ಅಂತಿಮ ದರ್ಶನಕ್ಕೆ ಇರಿಸಿ ಮಧ್ಯಾಹ್ನ 2 ಗಂಟೆ ನಂತರ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದ್ದಾರೆ. ಇದನ್ನೂ ಓದಿ : ನಾವು ದಾರಿ ತಪ್ಪಿದಾಗ ತಿದ್ದಿ ಸರಿದಾರಿಗೆ ತರುತ್ತಿದ್ದರು; ತಾಯಿ ನೆನೆದು ಕಣ್ಣೀರಿಟ್ಟ ಹೆಚ್‌ಡಿಕೆ..!

Related posts

ಫ್ಲೈ ಬಸ್ ಸರದಿ – ಬೆಂ-ಮೈ ಎಕ್ಸ್‌ಪ್ರೆಸ್ ವೇಯಲ್ಲಿ ಪುಡಿ ರೌಡಿಗಳ ಹಾವಳಿ..!

Kalpana Editor

ಶಾಸಕ ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು..!

Kalpana Editor

ಮಾವಿನಹಣ್ಣು ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ..!

Kalpana Editor