22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಆಟವಾಡ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಮಗು – ಸ್ಥಿತಿ ಗಂಭೀರ..!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಾ ಗ್ರಿಲ್ ಹತ್ತಿದ್ದ 4 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ ಪುತ್ರಿ ಗಗನ ಸಿಂಧು ಪೋಷಕರೊಂದಿಗೆ ಬಟ್ಟೆ ಖರೀದಿಸಲು ಅಂಗಡಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ಪೋಷಕರು ಖರೀದಿಯಲ್ಲಿ ನಿರತರಾಗಿದ್ದ ಸಮಯದಲ್ಲಿ ಮಗು ಅಂಗಡಿಯ ಗ್ರಿಲ್ ಮೇಲೆ ಹತ್ತಿ ಆಟವಾಡುತ್ತಿತ್ತು. ಈ ವೇಳೆ ಒಂದೆರಡು ಬಾರಿ ತಾಯಿ ಮಗುವನ್ನು ಒಳಗೆ ಕರೆದುಕೊಂಡು ಹೋಗಿದ್ದರು. ಆದರೂ ಮತ್ತೆ ಗ್ರಿಲ್ ಬಳಿ ಬಂದಿದ್ದ ಬಾಲಕಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ.

ತಕ್ಷಣವೇ ಗಾಯಗೊಂಡ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಅಂಗಡಿ ಮಾಲೀಕರಾದ ನಾರಾಯಣಸಿಂಗ್ ಹಾಗೂ ರೋಹಿತ್ ಮಾತನಾಡಿದ್ದು, ಮೂರ್ನಾಲ್ಕು ಬಾರಿ ಹೊರಗಡೆ ಮಗು ಹೋಗಿತ್ತು. ಈ ವೇಳೆ ತಾಯಿ ಎರಡು, ಮೂರು ಬಾರಿ ಮಗುವನ್ನು ಕರೆದುಕೊಂಡು ಬಂದಿದ್ದರು. ಆದರೂ ಕೊನೆಗೆ ಮಗು ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಬಿಡದಿ ಟೌನ್‌ಶಿಪ್ ಯೋಜನೆ; ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ, ರೈತರ ವಿರುದ್ಧ ಎಫ್‌ಐಆರ್‌..!

Related posts

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ..!

Kalpana Editor

ಭೀಕರ ಬರವಿದ್ದರೂ ಕೈ ಕಟ್ಟಿ ಕೂತ ಸರ್ಕಾರ; ಸದನದಲ್ಲಿ ರಾಜ್ಯದ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ – ಬಿ.ವೈ. ವಿಜಯೇಂದ್ರ

Kalpana Editor

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ..!

Kalpana Editor