23.6 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಕಾಮನ್‌ವೆಲ್ತ್ ಗೇಮ್ಸ್‌ – ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ

ಬೆಂಗಳೂರು : 2026ರ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪ್ಯಾರಾ ಅಥ್ಲೀಟ್, ಹೆಮ್ಮೆಯ ಕನ್ನಡತಿ ಶಿಲ್ಪಾ ಕೆ.ಶೈಲಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ಬುಧವಾರ ಸತ್ಕರಿಸಿ ಗೌರವಿಸಿದರು.

ತಮ್ಮ ನಿವಾಸಕ್ಕೆ ಶಿಲ್ಪಾ ಅವರನ್ನು ಹಾಗೂ ಅವರ ಇಬ್ಬರು ತರಬೇತುದಾರರನ್ನು ಬರಮಾಡಿಕೊಂಡು ಗೌರವಿಸಿದ ಸಚಿವರು, ಶಿಲ್ಪಾ ಅವರ ಸಾಧನೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಿಲ್ಪಾ ಅವರ ತರಬೇತುದಾರರಾದ ಸತ್ಯನಾರಾಯಣ ಹಾಗೂ ಪುಷ್ಪಾ ನಿರಂಜನ್‌ ಪ್ರಸಾದ್ ಅವರನ್ನು ಸಚಿವರು ಸತ್ಕರಿಸಿದರು.

ಈ ಸಂದರ್ಭದಲ್ಲಿ ಶಿಲ್ಪಾ ಅವರ ಹಿನ್ನೆಲೆ, ಅವರ ಈವರೆಗಿನ ಸಾಧನೆ ಹಾಗೂ ಅವರ ತಂದೆ ತಾಯಿ ಇನ್ನಿತರ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ನಿಮ್ಮ ಸಾಧನೆ ಪ್ರೇರಣಾದಾಯಕ, ಐತಿಹಾಸಿಕ. ನೀವು ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೆ.ಆರ್.‌ ನಗರ ತಾಲೂಕಿನವರು. ಯುವ ತಲೆಮಾರಿಗೆ ನೀವು ಮಾದರಿ ಆಗಿದ್ದೀರಿ ಎಂದರು.

ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರಕೊಪ್ಪಲು ಗ್ರಾಮದ ಸಾಮಾನ್ಯ ರೈತ ಕುಟುಂಬದ ಕುಡಿಯಾದ ಶಿಲ್ಪಾ ಅವರು ತಮ್ಮ ನಾಲ್ಕನೇ ವಯಸ್ಸಿನಲ್ಲಿದ್ದಾಗಲೇ ಭೀಕರ ಅಪಘಾತದಲ್ಲಿ ಎಡಗಾಲು ಕಳೆದುಕೊಂಡು ಅಂಗವೈಕಲ್ಯಕ್ಕೆ ತುತ್ತಾಗಿದ್ದರು. ಆ ನೋವು ಮತ್ತು ಅಂಗವೈಕಲ್ಯವನ್ನು ದಿಟ್ಟತನದಿಂದ ಮೆಟ್ಟಿ ನಿಂತ ಅವರು, ತಮ್ಮ ಧೃಡ ಸಂಕಲ್ಪದೊಂದಿಗೆ ಇಡೀ ರಾಷ್ಟ್ರವೇ ಹೆಮ್ಮೆಪಡುವ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ : ನಾಗರಿಕ ಸಮಾಜಕ್ಕೆ ಅಪಾಯ; ವಿದೇಶಿ ಕೊಡುಗೆ ತಿದ್ದುಪಡಿ ಮಸೂದೆಗೆ ತರೂರ್‌ ಆಕ್ಷೇಪ..!

Related posts

ಲೈಂಗಿಕ ದೌರ್ಜನ್ಯ ಪ್ರಕರಣ; ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ

kknewskannada1987@gmail.com

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ; ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ..!

kknewskannada1987@gmail.com

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ಮುರ್ಮು

kknewskannada1987@gmail.com