29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿದೇಶರಾಜ್ಯ

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ; ನಟ ಉದಯನಿಧಿ ಸ್ಟಾಲಿನ್ ಬಂಧನ..!

ಚೆನ್ನೈ : ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ ಕುರಿತು ಭಾಷಣ ಮಾಡುವ ವೇಳೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಕಾವೇರಿ ನೀರಿನ ವಿಚಾರದಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದ ವೇಳೆ ಉದಯನಿಧಿ ನೀಡಿದ ಹೇಳಿಕೆಯನ್ನು ಹಲವರು ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಮಾಡಿದ ದ್ವಂದ್ವಾರ್ಥದ ಮಾತು ಎಂದು ಆರೋಪಿಸಿದ್ದರು. ಈ ಕುರಿತು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಒತ್ತಾಯಿಸಿದ್ದವು.

ಈ ಪ್ರಕರಣ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಪೊಲೀಸರು ಉದಯನಿಧಿ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂಧನದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಉದಯನಿಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮುಖ್ಯಮಂತ್ರಿಯನ್ನು ಬಿಟ್ಟರೆ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದು ರಾಜಕೀಯ ಪ್ರತೀಕಾರದ ಕ್ರಮ. ಈ ವಿಚಾರದ ಅಂತಿಮ ತೀರ್ಪನ್ನು ನ್ಯಾಯಾಲಯವೇ ನೀಡಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂಓದಿ : ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!

Related posts

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor

ಕಾವೇರಿ ಆತಂಕ; ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿಗೆ ಜಲಮಂಡಳಿ ಸಿದ್ಧತೆ..!

Kalpana Editor

ಕೋತಿಗಳಿಗೆ ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು..!

Kalpana Editor