August 27, 2026
kranthikidi.com
ತಾಜಾಸುದ್ದಿಸಿನಿಮಾ

ನಟ ಕಮಲ್ ಹಾಸನ್ ಕನ್ನಡ ಹೇಳಿಕೆ ವಿವಾದ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ..!

ಬೆಂಗಳೂರು : ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ, ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. 2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ʼತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿʼ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ಮೊದಲು ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆದರೆ, ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ. ಇದನ್ನೂ ಓದಿ : ಹೊಸ ಆಲ್ಕೋಹಾಲ್ ನೀತಿ ಮ್ಯಾಜಿಕ್ – ಬಿಯರ್ ಮಾರಾಟದಲ್ಲಿ ಭಾರಿ ಏರಿಕೆ..!

Related posts

ಮೈಸೂರಿಗೆ ಪ್ರಧಾನಿ ಮೋದಿ ಭೇಟಿ; ವಿವೇಕಾನಂದ ಸ್ಮಾರಕ ಲೋಕಾರ್ಪಣೆ..!

Kalpana Editor

ಸೆ.6ರಿಂದ ಹಿಂದಿ ಬಿಗ್ ಬಾಸ್ ಶುರು; ಮೊದಲ ಪ್ರೋಮೋ ಔಟ್..!

kknewskannada1987@gmail.com

ಮೋಹನ್ ಭಾಗವತ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಕೇಂದ್ರ ಸರ್ಕಾರ ತನಿಖೆ ನಡೆಸಬೇಕು – ಎಸ್. ಮನೋಹರ್

kknewskannada1987@gmail.com