22.2 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಚುನಾವಣೆ; ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳು – ಹೆಚ್​​ಡಿಕೆ

ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಅವರ ಕೈಯಲ್ಲಿದ್ದು, ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಗೆಲ್ಲುವ ಉದ್ದೇಶದಿಂದ ಕುತಂತ್ರದ ಮಾರ್ಗ ಅನುಸರಿಸುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಆತ್ಮಸಾಕ್ಷಿ ಮತವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಸರ್ಪ್ಲಸ್ ಮತಗಳ ಬೆಂಬಲಕ್ಕಾಗಿ ಬಿಜೆಪಿ ನಾಯಕರಿಗೆ ಮನವಿ ಮಾಡಲಾಗಿದೆ. ಇದು ನಮ್ಮ ಮತಗಳನ್ನು ಭದ್ರವಾಗಿ ಇಟ್ಟುಕೊಳ್ಳುವ ಸಲುವಾಗಿ ಮಾಡಿದ ಪ್ರಯತ್ನವಷ್ಟೇ ಎಂದವರು ತಿಳಿಸಿದ್ದಾರೆ. ಇದನ್ನೂ ಓದಿ : ಸರ್ಕಾರಿ ನೌಕರರ ಕುಟುಂಬಕ್ಕೆ ‘ಗೃಹಲಕ್ಷ್ಮಿ ಯೋಜನೆ’ ಕಟ್..!

Related posts

ಕಲ್ಲು ಕ್ವಾರಿ ದುರಂತ – ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ ಜಿ.ಪರಮೇಶ್ವರ್‌

Kalpana Editor

ಟೆಲಿಗ್ರಾಂ ರೇಪ್ ನೆಟ್‌ವರ್ಕ್ – ಮಹಿಳೆಯರಿಗೆ ಡ್ರಗ್ಸ್ ನೀಡಿ ಅತ್ಯಾಚಾರ..!

Kalpana Editor

ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ ಸಂಭ್ರಮ..!

kknewskannada1987@gmail.com