22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

ಬೆಂಗಳೂರು : ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಎದ್ದು ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ : ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ; ಆರೋಪಿ ಪುಣ್ಯೇಶ್ ಅರೆಸ್ಟ್‌..!

Related posts

ನೀಟ್ ಪೇಪರ್ ಲೀಕ್; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ – ಪ್ರಧಾನಿ ಮೋದಿ

Kalpana Editor

ನಿಲ್ಲದ ಮಳೆ; ದಕ್ಷಿಣ ಕನ್ನಡದ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ..!

kknewskannada1987@gmail.com

E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ

Kalpana Editor