August 26, 2026
kranthikidi.com
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿ ದುರಂತ – ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ ಜಿ.ಪರಮೇಶ್ವರ್‌

ಬೆಂಗಳೂರು : ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಜಿ.ಪರಮೇಶ್ವರ್ ಅವರು, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.

ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕ್ವಾರಿ ದುರಂತದಲ್ಲಿ 7 ಜನ ಮೃತಪಟ್ಟಿದ್ದರೆ, ಐವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಗಾಯಾಳು ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಕೈ ಕಾಲುಗಳು, ಹಣೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ರಕ್ತಸ್ರಾವದಿಂದಾಗಿ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ – 7 ಮಂದಿ ಬಲಿ

Related posts

ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ..!

Kalpana Editor

ಸಿಎಂ ಆದ ಡಿಕೆಶಿ ಮೊದಲ ದಿನವೇ ಸಚಿವರಿಗೆ ಎಚ್ಚರಿಕೆ..!

Kalpana Editor

ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ..!

Kalpana Editor