29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!

ಹಾಸನ : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಗಣ್ಯರು ಅಂತಿಮ ಪುಷ್ಪನಮನ ಸಲ್ಲಿಸಿದ ಬಳಿಕ 3 ಸುತ್ತು ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ನಮನದೊಂದಿಗೆ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಯಿತು. 2 ನಿಮಿಷ ಮೌನಾಚರಣೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಗಳು ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ದೇವೇಗೌಡರ ಕಾಲಿಗೆ ನಮಸ್ಕರಿಸಿ ವಂದಿಸಿದರು.

ಬಳಿಕ ದೇಹ ಶುದ್ಧಿ ಕಾರ್ಯ ನಡೆಯಿತು. ದೇವೇಗೌಡರು ಮತ್ತು ಕುಟುಂಬಸ್ಥರಿಂದ ಪಾರ್ಥಿವ ಶರೀರಕ್ಕೆ ಅಂತಿಮ ಪೂಜಾ ವಿಧಿವಿಧಾನ ನೇರವೇರಿಸಲಾಯಿತು. ಇದೇ ವೇಳೆ ಅರ್ಚಕರ ತಂಡದಿಂದ ಸ್ತೋತ್ರ ಪಠಣ ಕಾರ್ಯವೂ ನಡೆಯಿತು. ನಂತರ ಮೂರು ಸುತ್ತು ಪಲ್ಲಕ್ಕಿ ಮೆರವಣಿಗೆ ನಡೆಸಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಈ ದೃಶ್ಯ ನೆರೆದಿದ್ದವರ ಕಣ್ಣಂಚಲ್ಲಿ ನೀರು ತರಿಸಿತು. ಚೆನ್ನಮ್ಮನವರ ಅಂತಿಮ ದರ್ಶನಕ್ಕಾಗಿ ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ದಂಡು ದಂಡಾಗಿ ಆಗಮಿಸಿದ್ದರು.

ಹಿರಿಯ ಪುತ್ರ ಹೆಚ್‌.ಡಿ ರಮೇಶ್ ಅವರಿಂದ ಅಂತ್ಯಕ್ರಿಯೆ ಕಾರ್ಯವಿಧಾನ ನೆರವೇರಿತು. ಗುಂಡಿಯಲ್ಲಿ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ನೆರವೇರಿಸಿದ ಬಳಿಕ ಪಲ್ಲಕ್ಕಿಯಲ್ಲಿ ಹೊತ್ತುತಂದ ಪಾರ್ಥಿವ ಶರೀರವನ್ನ ಇಳಿಸಿ, ಅಂತಿಕ್ರಿಯೆ ಮಾಡಲಾಯಿತು. ಇದೇ ವೇಳೆ, ನಿರ್ಮಲಾನಂದನಾಥ ಶ್ರೀಗಳು ಮತ್ತು ಶಂಭುನಾಥ ಸ್ವಾಮೀಜಿ ಸೇರಿದಂತೆ ಧಾರ್ಮಿಕ ಮುಖಂಡರು ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಹೆಚ್‌.ಡಿ ಕುಮಾರಸ್ವಾಮಿ, ವಿ. ಸೋಮಣ್ಣ, ಶಿವರಾಜ್‌ ಸಿಂಗ್‌ ಚೌಹಾಣ್‌, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ಸಿಎಂ ಡಿಕೆ ಶಿವಕುಮಾರ್‌, ಸಭಾಪತಿ ಬಸವರಾಜ ಹೊರಟ್ಟಿ, ಇಂಧನ ಸಚಿವ ಕೆ.ಜೆ ಜಾರ್ಜ್‌, ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ, ಶಾಸಕರಾದ ಬಿ.ವೈ ವಿಜಯೇಂದ್ರ, ಬಿ.ವೈ ರಾಘವೇಂದ್ರ, ಡಾ. ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ಹಿರಿಯ ಹಾಗೂ ಕಿರಿಯ ಶಾಸಕರು, ಸಂಸದರು, ಪರಿಷತ್‌ನ ಸದಸ್ಯರು ಇತರ ಗಣ್ಯರಿಂದ ಅಂತಿಮ ಪುಷ್ಪನಮನ ಸಲ್ಲಿಸಿದರು. ಇದನ್ನೂ ಓದಿ : ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಸಲ್ಲಿಸಿದ್ದ, ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌..!

Related posts

ಪೆಟ್ರೋಲ್‌ ಟ್ಯಾಂಕ್‌ಗೆ ನೀರು ಹಾಕಿ ಎಥೆನಾಲ್‌ ವಿರುದ್ಧ ಅಪಪ್ರಚಾರ; ಯೂಟ್ಯೂಬರ್‌ ವಿರುದ್ಧ ಟೊಯೋಟಾ ಎಫ್‌ಐಆರ್‌

Kalpana Editor

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಗಂಭೀರ ಗಾಯ..!

Kalpana Editor

ತಾರಕಕ್ಕೇರಿದ ಬಿಡದಿ ಭೂಯುದ್ಧ – ಬಿಜೆಪಿ ಬಿಟ್ಟು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ..!

Kalpana Editor