29.2 C
ಬೆಂಗಳೂರು
June 15, 2026
kranthikidi.com
ತಾಜಾಸುದ್ದಿಸಿನಿಮಾ

ಧರ್ಮೇಂದ್ರ, ಮಮ್ಮುಟ್ಟಿ ಸೇರಿ ಹಲವರಿಗೆ ಇಂದು ಪದ್ಮ ಪ್ರಶಸ್ತಿ ಪ್ರದಾನ..!

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭವು ರಾಜಧಾನಿ ನವದೆಹಲಿಯಲ್ಲಿ ಇಂದು (ಮೇ 25) ಸಂಜೆ 5 ಗಂಟೆಗೆ ಅದ್ಧೂರಿಯಾಗಿ ಜರುಗಲಿದೆ. ಈ ಬಾರಿ ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಹಲವು ಧೀಮಂತ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಈ ವರ್ಷ ಕೇಂದ್ರ ಸರ್ಕಾರವು ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಹಾಗೂ 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ.

ಹಿರಿಯ ನಟ ಧರ್ಮೇಂದ್ರ ಅವರಿಗೆ ಪದ್ಮವಿಭೂಷಣ: ಹಿಂದಿ ಚಿತ್ರರಂಗದ ದಶಕಗಳ ಇತಿಹಾಸದಲ್ಲಿ ‘ಶೋಲೆ’ ರೀತಿಯ ಗಮನಾರ್ಹ ಸಿನಿಮಾಗಳ ಮೂಲಕ ಕೋಟ್ಯಂತರ ಪ್ರೇಕ್ಷಕರನ್ನು ರಂಜಿಸಿದ ಎವರ್‌ಗ್ರೀನ್ ಸೂಪರ್‌ಸ್ಟಾರ್ ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುತ್ತಿದೆ. ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿ ಈ ಗೌರವ ಸಲ್ಲಿಕೆ ಆಗುತ್ತಿದೆ.

ಮಮ್ಮುಟ್ಟಿ ಮತ್ತು ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ: ಮಲಯಾಳಂ ಚಿತ್ರರಂಗದ ಹೆಮ್ಮೆಯ ನಟ ಮಮ್ಮುಟ್ಟಿ ಅವರಿಗೆ ಚಿತ್ರರಂಗದಲ್ಲಿನ ಅವರ ಸುದೀರ್ಘ ಹಾಗೂ ಅತ್ಯುತ್ತಮ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಇವರೊಂದಿಗೆ, 90 ಹಾಗೂ 2000ರ ದಶಕದಲ್ಲಿ ತಮ್ಮ ಮಧುರ ಧ್ವನಿಯ ಮೂಲಕ ಬಾಲಿವುಡ್‌ನಲ್ಲಿ ಅಸಂಖ್ಯಾತ ಸೂಪರ್‌ಹಿಟ್ ಗೀತೆಗಳನ್ನು ನೀಡಿದ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೂ ಪದ್ಮಭೂಷಣ ನೀಡಿ ಗೌರವಿಸಲಾಗುತ್ತಿದೆ.

ಆರ್. ಮಾಧವನ್ ಹಾಗೂ ಸತೀಶ್ ಶಾ ಅವರಿಗೆ ಪದ್ಮಶ್ರೀ: ‘ರೆಹನಾ ಹೈ ತೇರೆ ದಿಲ್ ಮೇ’, ‘3 ಇಡಿಯಟ್ಸ್’, ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಮುಂತಾದ ಚಿತ್ರಗಳ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ಆರ್. ಮಾಧವನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. ಇದರೊಂದಿಗೆ, ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಹಾಗೂ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ತಮ್ಮ ಅದ್ಭುತ ಹಾಸ್ಯದ ಮೂಲಕ ಮನೆಮಾತಾಗಿದ್ದ ದಿವಂಗತ ನಟ ಸತೀಶ್ ಶಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಗೌರವ ಸಮರ್ಪಿಸಲಾಗುತ್ತಿದೆ.

Related posts

ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ – ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಡಿಕೆ ಶಿವಕುಮಾರ್‌

Kalpana Editor

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ..!

Kalpana Editor

ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ..!

Kalpana Editor