23.6 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸ್ಥಾನ ಸಿಗದ ಬೇಸರ; ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್‌ ರಾಜೀನಾಮೆ..!

ರಾಯಚೂರು : ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್‌, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.

ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್‌ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ : ಕೇಂದ್ರ Vs ಮೆಟಾ; ಎಚ್ಚರಿಕೆ ಬೆನ್ನಲ್ಲೇ, ಕ್ಷಮೆ ಕೋರಿದ ಸಿಇಒ ಮಾರ್ಕ್ ಜುಕರ್‌ಬರ್ಗ್

Related posts

ಲಕ್ಷ ಕೊಟ್ರೂ ಕಾರಿಗೆ ಡಿಮ್ಯಾಂಡ್‌ – ವರದಕ್ಷಿಣೆ ಚಿತ್ರಹಿಂಸೆಗೆ ಇನ್ಸ್ಟಾ ಇನ್ಫ್ಲೂಯೆನ್ಸರ್‌ ಬಲಿ..!

Kalpana Editor

ಅಭಿಮಾನಿಗಳಿಗೆ ವಿಡಿಯೋ ಕಾಲ್ ಮಾಡಿದ ನಟ ಅಜಿತ್ – ಅಪರೂಪದ ನಡೆ..!

Kalpana Editor

ಆಟಗಾರ ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕ್ರಿಸ್ ಗೇಲ್

Kalpana Editor