28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ, ಆದಾಯ ಮೀರಿ ಆಸ್ತಿ ಗಳಿಕೆ ಕೇಸ್..!

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ‌ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 03) ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.

ಕೆ.ಎಸ್.ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದರು. ಬಳಿಕ ಲೋಕಾಯುಕ್ತ ಎಸ್​ಪಿಪಿ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿದ್ದು, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್​​ ಮುಂದೆ ಸ್ಪಷ್ಟಪಡಿಸಿದರು. ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ, ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತದನಂತರ ನ್ಯಾಯಾಲಯವು ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಆ ಆದೇಶ ಆಧರಿಸಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸದಾಗಿ ಎಫ್‌ಐಆರ್‌ ದಾಖಲಿಸಿದ್ದರು. ತದನಂತರ ಈಶ್ವರಪ್ಪನವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ. ಇದನ್ನೂ ಓದಿ : ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮತ್ತೊಂದು ವಿಡಿಯೋ ರಿಲೀಸ್​​ – ಹೆಚ್‌ಡಿ ಕುಮಾರಸ್ವಾಮಿ

Related posts

‘ಸಮಂತಾ ತಾಯಿ ಆಗುತ್ತಿರುವುದು ನಿಜ’ ಕೊನೆಗೂ ಗುಡ್ ನ್ಯೂಸ್..!

Kalpana Editor

ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ..!

Kalpana Editor

ಕಾಡುಗೋಡಿ ಮಗು ಕೊಲೆ ಪ್ರಕರಣ; ಮೂವರು ಪೊಲೀಸರ ತಲೆದಂಡ..!

Kalpana Editor