20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಹೆಚ್‌ಡಿ ದೇವೇಗೌಡರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೇ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ. ಶಿವಕುಮಾರ್, ಹಿರಿಯ ಮುತ್ಸದ್ದಿ ನಾಯಕನಿಗೆ ಗೌರವ ಸಲ್ಲಿಸಿದರು.

ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಹಿರಿಯರ ಮಾರ್ಗದರ್ಶನ ಮತ್ತು ಸಹಕಾರ ಸದಾ ಇರಬೇಕೆಂದು ಕೋರಿದರು. ಇದನ್ನೂ ಓದಿ : ಡಿ.ಕೆ.ಶಿವಕುಮಾರ್ ರಾಜ್ಯದ 25ನೇ ಮುಖ್ಯಮಂತ್ರಿಗಳಾಗಿ ಪದಗ್ರಹಣ ಹಿನ್ನೆಲೆ; ಸಾವಿರಾರು ಜನರಿಗೆ ಅನ್ನದಾನ ಹಾಗೂ 50 ಸಾವಿರ ಸಿಹಿ ವಿತರಣೆ..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿರುವ ಈ ಅದ್ಧೂರಿ ಕಾರ್ಯಕ್ರಮವು ಇಂದು ಸಂಜೆ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ ಜರುಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಜ್ಯದ ಇಬ್ಬರೂ ದೈತ್ಯ ಹಿರಿಯ ನಾಯಕರನ್ನು ಖುದ್ದಾಗಿ ಆಹ್ವಾನಿಸುವ ಮೂಲಕ ಡಿಕೆಶಿ ಹೊಸ ರಾಜಕೀಯ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

Related posts

ಶೀಘ್ರವೇ ಹಾರ್ಮುಜ್‌ ತೆರೆಯದಿದ್ರೆ ಇರಾನ್‌ಗೆ ಭಾರಿ ಹೊಡೆತ ಬೀಳುತ್ತೆ; ಟ್ರಂಪ್‌

kknewskannada1987@gmail.com

ವಿದೇಶಿ ಹಿಂದೂ ದೇಗುಲಗಳ ಜೀರ್ಣೋದ್ಧಾರಕ್ಕೆ ಪ್ರಧಾನಿ ಮೋದಿ ಕೊಡುಗೆ..!

Kalpana Editor

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ; ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡು..!

Kalpana Editor