29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಸ್ವೀಕಾರ..!

ಬೆಂಗಳೂರು : ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ ಪಟ್ಟಾಭಿಷೇಕ ನಡೆಯುತ್ತಿದೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್​ ಕಟೌಟ್​​, ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಆಗಮಿಸಿದ್ದಾರೆ. ವಿಶೇಷ ಅಂದರೆ ಬಂಡೆ ಪ್ರಮಾಣ ವಚನಕ್ಕೆ ವಾಸ್ತು ಟಚ್​ ಕೊಡಲಾಗಿದ್ದು, ಸರ್ವಧರ್ಮದ ಗುರುಗಳಿಗೂ ಭಾಗಿಯಾಗಿದ್ದಾರೆ.

ಸಂಜೆ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್​ ಪಟ್ಟಾಭಿಷೇಕ ನಡೆದಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ, ಕಾರ್ಯಕ್ರಮಗಳ ವೇದಿಕೆ ಪಶ್ಚಿಮಾಭಿಮುಖವಾಗಿ ಇರುತ್ತಿತ್ತು. ಆದರೆ ಈ ಬಾರಿ ಜ್ಯೋತಿಷಿ ಆರಾಧ್ಯ ಸಲಹೆಯಂತೆ, ವೇದಿಕೆಯನ್ನು ಪೂರ್ವಾಭಿಮುಖವಾಗಿ ಸಿದ್ಧಪಡಿಸಲಾಗಿದೆ. ಡಿಕೆ ಶಿವಕುಮಾರ್​ ಸಹೋದರ ಡಿಕೆ ಸುರೇಶ್, ಇಡೀ ಕಾರ್ಯಕ್ರಮದ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದಾರೆ. ಇದನ್ನೂ ಓದಿ : ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾ

ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು.

ತುಲಾ ಲಗ್ನದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ ಅದನ್ನೆಲ್ಲ ಮೆಟ್ಟಿ ನಿಂತು ಜನಪರ ಹಾಗೂ ಸುಗಮ ಆಡಳಿತ ನಡೆಸಲು ಈ ಮುಹೂರ್ತ ಹಾದಿ ಸುಗಮ ಮಾಡಿಕೊಡಲಿದೆ ಎಂಬ ಬಲವಾದ ನಂಬಿಕೆ ಇದೆ ಎಂದು ಹೇಳಲಾಗಿದೆ.

Related posts

ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!

Kalpana Editor

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ..!

Kalpana Editor

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ..!

Kalpana Editor