29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ನಿಕೇತ್‌ ಮೌರ್ಯ, ಭಾವನಾ ರಾಮಣ್ಣ ಸೇರಿದಂತೆ, ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಿದ ಡಿಕೆಶಿ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಗೆ ಗೈರು ಹಾಜರಿ ಹಾಕಿದ ಕೆಪಿಸಿಸಿ ಪದಾಧಿಕಾರಿಗಳಿಗೆ ಅಧ್ಯಕ್ಷ ಡಿಕೆ ಶಿವಕುಮಾರ್‌ ಬಿಗ್‌ ಶಾಕ್‌ ನೀಡಿದ್ದಾರೆ. ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ, ಶಿವಮೂರ್ತಿ ನಾಯಕ್, ಎಂ ಸಿ ವೇಣುಗೋಪಾಲ್, ಷಣ್ಮುಖ ಶಿವಳ್ಳಿ, ಸಿಆರ್ ಮನೋಹರ್ ಸೇರಿದಂತೆ ಮೂವರು ಕೆಪಿಸಿಸಿ ಉಪಾಧ್ಯಕ್ಷರು, 29 ಪ್ರಧಾನ ಕಾರ್ಯದರ್ಶಿಗಳಿಗೆ ಡಿಕೆಶಿವಕುಮಾರ್ ಗೇಟ್ ಪಾಸ್ ನೀಡಿದ್ದಾರೆ.

ತಕ್ಷಣವೇ ಈ ನಾಯಕರನ್ನು ಪಕ್ಷದ ಹುದ್ದೆಯಿಂದ ಕೈ ಬಿಡಲಾಗಿದೆ ಎಂದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಲಾ ಅವರು ಪಕ್ಷದ ಸಭೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಸೂಚನೆಯ ಬೆನ್ನಲ್ಲೇ ಗೈರಾಗಿರುವ ನಾಯಕರಿಗೆ ಗೇಟ್‌ಪಾಸ್‌ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿಎಸ್‌ಐಆರ್‌ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆಯ ನಡೆದಿತ್ತು.

Related posts

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ..!

Kalpana Editor

ಮಹಿಳೆಯರ ಮೇಲೆ ಕಾಲಿಂದ ನೀರು ಎರಚುತ್ತಾರೆ, ಗೂಂಡಾಗಿರಿ ಮಾಡ್ತಿದ್ದಾರೆ: ಕನ್ನಡಿಗರ ಆಕ್ರೋಶ..!

Kalpana Editor