August 27, 2026
kranthikidi.com
ತಾಜಾಸುದ್ದಿರಾಜ್ಯ

ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ, ವೈದ್ಯೆ 5 ವರ್ಷ ಅಮಾನತು..!

ನವದೆಹಲಿ : ಲೋಹಗಢ ಕೋಟೆಯಿಂದ ತಳ್ಳಿ ಕೊಂದಿದ್ದ ಕೇತನ್ ಅಗರ್ವಾಲ್ ಸಾವನ್ನು ಅಪಹಾಸ್ಯ ಮಾಡಿದ್ದ ದಂತ ವೈದ್ಯೆಯನ್ನು ಅಖಿಲ ಭಾರತ ದಂತ ವೈದ್ಯಕೀಯ ವಿದ್ಯಾರ್ಥಿಗಳ ಮತ್ತು ಶಸ್ತ್ರಚಿಕಿತ್ಸಕರ ಸಂಘ ಐದು ವರ್ಷಗಳ ಕಾಲ ಅಮಾನತು ಮಾಡಿದೆ.

ಅಮಾನತು ಆದೇಶದ ಪ್ರಕಾರ, ಮಧ್ಯಪ್ರದೇಶದ ಎಐಡಿಎಸ್‌ಎ ಸಂಘಟನೆಯ ಖಜಾಂಚಿಯಾಗಿದ್ದ ಡಾ.ಮುಸ್ಕಾನ್ ಸೋನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಇತ್ತೀಚಿಗೆ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಜೂ.18ರಂದು ಲೋಹಗಢ್ ಕೋಟೆಯಲ್ಲಿ ಕೊಲೆಯಾದ ಕೇತನ್ ಅಗರ್ವಾಲ್ ಸಾವಿನ ಕುರಿತು ಅಪಹಾಸ್ಯ ಮಾಡಿದ್ದರು.

ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದು, ಅತ್ಯಂತ ಅಸಭ್ಯ, ಆಕ್ಷೇಪಾರ್ಹ ಮತ್ತು ಅಗೌರವ ಸೂಚಿಸುವ ಮಾತುಗಳನ್ನಾಡಿದ್ದಾರೆ. ಇದು ಸಂಘಟನೆಯ ನಿಯಮ ಮತ್ತು ನೈತಿಕ ಮೌಲ್ಯಗಳ ಉಲ್ಲಂಘನೆ ಎಂದು ಸಂಸ್ಥೆ ತಿಳಿಸಿದೆ. ಮುಸ್ಕಾನ್ ಮುಂದಿನ ಐದು ವರ್ಷಗಳ ಕಾಲ ಸಂಘಟನೆಯ ಯಾವುದೇ ಹುದ್ದೆ, ಜವಾಬ್ದಾರಿ, ಸಮಿತಿ ಅಥವಾ ಸದಸ್ಯತ್ವ ಹೊಂದಲು ಅರ್ಹರಾಗಿರುವುದಿಲ್ಲ.

ಅಲ್ಲದೆ, ಯಾವುದೇ ಅಧಿಕೃತ ಚಟುವಟಿಕೆಗಳಲ್ಲಿ ಭಾಗವಹಿಸಲು ಅಥವಾ ಪ್ರತಿನಿಧಿಸಲು ಅವರಿಗೆ ಅವಕಾಶವಿರುವುದಿಲ್ಲ ಎಂದಿದೆ. ಇನ್ನು ಕೇತನ್ ಅಗರ್ವಾಲ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅವರ ನಿಶ್ಚಿತ ವಧು ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಎನ್ನಲಾದ ಚೇತನ್ ಚೌಧರಿ ಅನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ : ಟ್ರಕ್‌ಗೆ ಡಿಕ್ಕಿ, ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಏಳು ಮಂದಿ ಸಾವು..!

Related posts

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ; ಚಿನ್ನದ ಪಲ್ಲಕ್ಕಿ, ವಿಶೇಷ ಪೂಜೆ ಸಲ್ಲಿಕೆ..!

Kalpana Editor

‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ನೆನೆದು ಗಳ ಗಳತೆ ಅತ್ತ ಹೆಚ್​​.ಡಿ.ರೇವಣ್ಣ

Kalpana Editor

ಪೊಲೀಸರ ಭರ್ಜರಿ ಬೇಟೆ; ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ ಜಿಲೆಟಿನ್ ಜಪ್ತಿ..!

kknewskannada1987@gmail.com