29.9 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿರಾಜ್ಯ

ಆ.13ಕ್ಕೆ ವೃತ್ತಿಪರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ; ಕೆಇಎ ಮಾಹಿತಿ

ಬೆಂಗಳೂರು : ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷಕ್ಕೆ ಪ್ರವೇಶ ಪಡೆಯಲು ಬಯಸುವ ವೃತ್ತಿಪರ ಡಿಪ್ಲೊಮಾ ಪದವೀಧರರಿಗೆ ಕೆಇಎ ಮಹತ್ವದ ಮಾಹಿತಿ ನೀಡಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆಗಸ್ಟ್ 13ರಂದು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ನಡೆಯಲಿದೆ.

ಇದುವರೆಗೂ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳು ಮಾತ್ರ ಆ.13ರಂದು ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಇದರ ಜೊತೆಗೆ ಯಾದಗಿರಿಯ ವೀರಪ್ಪ ನಿಸ್ಟಿ ಎಂಜಿನಿಯರಿಂಗ್ ಕಾಲೇಜಿನ ಸೀಟ್ ಮ್ಯಾಟ್ರಿಕ್ಸ್ ಕೂಡ ಲಭ್ಯವಾಗಿದೆ. ಈ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವ ವೃತ್ತಿಪರ ಅಭ್ಯರ್ಥಿಗಳೂ ದಾಖಲೆ ಪರಿಶೀಲನೆಗೆ ಹಾಜರಾಗಬಹುದು ಎಂದು ಕೆಇಎ ತಿಳಿಸಿದೆ.

ದಾಖಲೆ ಪರಿಶೀಲನೆಗೆ ಯಾವೆಲ್ಲ ದಾಖಲೆಗಳನ್ನು ತರಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಇದನ್ನೂ ಓದಿ : ರಂಗಭೂಮಿ ಕಲಾವಿದ ನಟ ವಿಜಯ್ ಕುಮಾರ್ ಜಿತ್ತೂರಿ ನಿಧನ..!

Related posts

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Kalpana Editor

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ; ಕೇಂದ್ರದ ನಡೆ ಖಂಡಿಸಿ, ಮೋದಿಗೆ ಪರಮೇಶ್ವರ್‌ ಪತ್ರ..!

Kalpana Editor

ನಿದ್ರೆ ಕಡಿಮೆಯಾದರೆ, ಮೂಳೆ-ಕೀಲುಗಳಿಗೆ ಆರೋಗ್ಯಕ್ಕೆ ಹಾನಿಕರ..!

kknewskannada1987@gmail.com