22 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿರಾಜ್ಯ

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಬಿರುಕುಗೊಂಡ ಬೃಹತ್ ತಡೆಗೋಡೆ..!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ಭದ್ರಾ ನದಿ ಪಾಲಾಗಲಿವೆ.

ಸುಮಾರು 50 ಅಡಿ ಎತ್ತರ ಹಾಗೂ 120 ಅಡಿ ಅಗಲವಿರುವ ಈ ಬೃಹತ್ ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಮಳೆ ಮತ್ತಷ್ಟು ಹೆಚ್ಚಾದರೆ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬೀಳುವ ಅಪಾಯವಿದೆ. ಒಂದು ವೇಳೆ ಈ ದುರಂತ ಸಂಭವಿಸಿದರೆ, ತಡೆಗೋಡೆಯ ಕೆಳಗಿರುವ ಮನೆ ಹಾಗೂ ಅಂಗಡಿಗಳು ನೇರವಾಗಿ ಭದ್ರಾ ನದಿಯ ಪಾಲಾಗಲಿವೆ. ಇದು ಶೃಂಗೇರಿ ಶಾರದಾ ಮಠಕ್ಕೆ ತೆರಳುವ ಪ್ರಮುಖ ಮಾರ್ಗದಲ್ಲೇ ಇರುವುದರಿಂದ ನಿರಂತರ ಸಾರ್ವಜನಿಕ ಸಂಚಾರವೂ ಇದ್ದು, ಹೆದರಿಕೆ ಶುರುವಾಗಿದೆ.

ಕಳೆದ 2024ರ ಮಳೆಗಾಲದಲ್ಲಿ ಕುಸಿತ ಕಂಡಿದ್ದ ಇದೇ ಜಾಗದಲ್ಲಿ, ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಈ ಹೊಸ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ, ಕಾಮಗಾರಿ ಪೂರ್ಣಗೊಂಡು ಕೇವಲ ಕೆಲವೇ ತಿಂಗಳು ಕಳೆಯುವುದರೊಳಗಾಗಿ ತಡೆಗೋಡೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ. ಗೋಡೆಯ ಒಳಗೆ ಕೇವಲ ಮಣ್ಣು ತುಂಬಿ ಕಳಪೆ ಕಾಮಗಾರಿ ನಡೆಸಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಜಿಲ್ಲಾಡಳಿತ ಮಾತ್ರ ಇದುವರೆಗೆ ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ತಾಲೂಕು ಆಡಳಿತದಿಂದ ಕಾಳಜಿ ಕೇಂದ್ರ ತರೆಯುತ್ತೇವೆ. ಆ ಮೂಲಕ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇವೆ. ಇನ್ನು ತಜ್ಞರ ತಂಡ ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದು, ಅವರ ಅಭಿಪ್ರಾಯ ಪಡೆದು ಮುಂದಿನ ಕ್ರಮಕೈಗೊಳ್ಳುವುದಾಗಿ’’ ತಿಳಿಸಿದರು. ಇದನ್ನೂ ಓದಿ : ಹಿರಿಯೂರು ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ; ಹೆಚ್‌ಡಿಕೆ ಸ್ಪಷ್ಟನೆ..!

Related posts

ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಯಕ್ಷಪ್ರಶ್ನೆ; ಕಾಂಗ್ರೆಸ್ ಸರ್ಕಾರ ಜನರಿಗೆ ಶಾಪವಾಗಿದೆ – ಬಿ.ವೈ. ವಿಜಯೇಂದ್ರ

Kalpana Editor

ಭೈರತಿ ಸುರೇಶ್​​ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು

Kalpana Editor

ಹೈವೇಯಲ್ಲಿ ಅಪಘಾತ – ಲಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಸಾವು..!

kknewskannada1987@gmail.com