20.8 C
ಬೆಂಗಳೂರು
September 22, 2026
kranthikidi.com
ಕ್ರೀಡೆತಾಜಾಸುದ್ದಿರಾಜ್ಯ

ಫಿಫಾ ವಿಶ್ವಕಪ್ ಫೈನಲ್ – ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಸಿಎಂ ಮನವಿ

ಬೆಂಗಳೂರು : ಫಿಫಾ ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ರಾಜ್ಯದ ಫುಟ್ಬಾಲ್ ಅಭಿಮಾನಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಎಲ್ಲಾ ಯುವಕರ ಮನವಿಯಂತೆ ಇಂದು ನಡೆಯಲಿರುವ ಫೈನಲ್ ಪಂದ್ಯ ವೀಕ್ಷಣೆಗೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3:30ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೇ ಗೆದ್ದರೂ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳದೆ, ಶಾಂತಿಯುತವಾಗಿ ಪಂದ್ಯ ವೀಕ್ಷಿಸಬೇಕು. ಪೊಲೀಸರು ಎಲ್ಲೆಡೆ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾತನಾಡಿ, ನಮಗೆ ಭಾನುವಾರ ಅಥವಾ ರಜೆ ಎನ್ನುವುದಿಲ್ಲ ಎಂದರು.

ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಯೂ ಕೆಲಸ ಮಾಡಬೇಕು. ಬರ ಪರಿಸ್ಥಿತಿ ಎದುರಿಸಲು ಡಿಸಿ ಹಾಗೂ ಸಿಇಒಗಳೊಂದಿಗೆ ವಿಡಿಯೊ ಸಂವಾದ ನಡೆಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಾಗಲೇ ಪ್ರತಿ ತಾಲ್ಲೂಕಿಗೆ 1 ಕೋಟಿ ರೂ. ಅನುದಾನ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. ಇದನ್ನೂ ಓದಿ : ಚೆನ್ನಮ್ಮ ವಯಸ್ಸು 89; 9 ಅನ್ನೋದು ಗಂಡಾಂತರ – ಬ್ರಹ್ಮಾಂಡ ಗುರೂಜಿ

Related posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ; ಶೋಭಾ ಕರಂದ್ಲಾಜೆ

Kalpana Editor

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ; ಸಿಎಂ ಡಿಕೆ ಶಿವಕುಮಾರ್ ಭರವಸೆ..!

kknewskannada1987@gmail.com

ಎಸ್​ಐಆರ್​​ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ಪತ್ರ

Kalpana Editor