22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಪಬ್​​​​ನಲ್ಲಿ ಅಗ್ನಿ ಅವಘಡ; ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ..!

ಮೈಸೂರು : ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ “ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್” ಪಬ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲು ಪಬ್‌ನ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಪಬ್‌ ಗೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.

ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಅಂದರೆ ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಬಹುದು ಎಂದು ಶಂಕಿಸಲಾಗಿದೆ. ಆದ್ರೆ, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್​​ಗೂ ಲಿಂಕ್

Related posts

ನಮಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು; ಡಿಸಿಎಂ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು..!

Kalpana Editor

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ..!

Kalpana Editor

ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಅಳಿಯ ಭಾವುಕ..!

Kalpana Editor