29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ..!

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ. ನೆನ್ನೆ (ಭಾನುವಾರ) ರಾತ್ರಿ ಸೂರಜ್ ಹೆಗ್ಡೆ (55) ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.

ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸೂರಜ್‌ಗೆ ಸಂತಾಪ : ಸೂರಜ್ ಅಗಲಿಕೆಗೆ ಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸೂರಜ್ ಹೆಗಡೆ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತೀವ್ರ ಸಂತಾಪ ವ್ಯಕ್ತಪಡಿಸಿದರು. ಇದನ್ನೂ ಓದಿ : 2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ; ಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದ ಅವರು
ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಅವರು ಭವಿಷ್ಯದ ಭರವಸೆಯಾಗಿದ್ದರು.

ಅವರ ನಿಧನದ ಸುದ್ದಿ ತುಂಬಾ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ವ್ಯಕ್ತಪಡಿಸಿದರು.

Related posts

ನನ್ನ ಮಗಳು ತಪ್ಪು ಮಾಡಿದ್ರೆ ಕೋಟೆಯಿಂದ ತಳ್ಳಿ ಬಿಡಿ; ಸಿಯಾ ಪೋಷಕರ ಆಕ್ರೋಶ..!

Kalpana Editor

74,000 ಹುದ್ದೆಗಳ ನೇಮಕಾತಿ ಭರ್ತಿಗೆ ಹೈಟೆಕ್ ಭದ್ರತೆ..!

Kalpana Editor

ಬೆಂಗಳೂರು ಉಳಿಸಿ; ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ನಗರಕ್ಕಾಗಿ ಎಎಪಿ ಹಸಿರು ಕಾರ್ಯಸೂಚಿ ಬಿಡುಗಡೆ..!

Kalpana Editor