July 11, 2026
kranthikidi.com
ತಾಜಾಸುದ್ದಿರಾಜ್ಯ

ಬಫರ್ ರಸ್ತೆ ಮತ್ತು ರಾಜಕಾಲುವೆ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ – ಡಿ.ಎಸ್. ರಮೇಶ್

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಬೆಳ್ಳಂದೂರು ವೇಸ್ಟ್ ವಿಯರ್/ಔಟ್‌ಲೆಟ್‌ನಿಂದ ಓಲ್ಡ್ ಏರ್‌ಪೋರ್ಟ್ ರಸ್ತೆ ಸಮೀಪದ ವರ್ಜೀನಿಯಾ ಮಾಲ್‌ವರೆಗೆ ಪ್ರಸ್ತಾಪಿತ ರಾಜಕಾಲುವೆಯ ಬಫರ್ ವಲಯ ಸಂರಕ್ಷಣೆ, ಸರ್ವಿಸ್ ರಸ್ತೆ ನಿರ್ಮಾಣ ಹಾಗೂ ಪ್ರವಾಹ ನಿಯಂತ್ರಣ ಯೋಜನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದರು. ಯೋಜನೆಯ ತಾಂತ್ರಿಕ ಅಂಶಗಳು, ಭೂಸ್ವಾಧೀನ ಪ್ರಕ್ರಿಯೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಪರಿಶೀಲಿಸಲಾದ ಪ್ರಮುಖ ಸ್ಥಳಗಳು – ಹೊರ ವರ್ತುಲ ರಸ್ತೆ, ಬೆಳ್ಳಂದೂರು ರೈಲು ನಿಲ್ದಾಣ, 100 ಅಡಿ ರಸ್ತೆ ಮುನ್ನೇಕೊಳಲು ಎಸ್.ಟಿ.ಪಿ, ವರ್ತೂರು ಕೆರೆ ಬಫರ್ ವಲಯ, ವರ್ತೂರು ಕೋಡಿ ಜಂಕ್ಷನ್.., ಆಯುಕ್ತರು ಭೇಟಿ ನೀಡಲಾದ ಪ್ರಮುಖ ಪ್ರದೇಶಗಳಲ್ಲಿನ ರಾಜಕಾಲುವೆಯ ಮೂಲ ಗಡಿ, ಬಫರ್ ವಲಯ, ಭೂಸ್ವಾಧೀನಕ್ಕೆ ಒಳಪಡುವ ಪ್ರದೇಶಗಳು, ಸರ್ವಿಸ್ ರಸ್ತೆ ನಿರ್ಮಾಣದ ಸಾಧ್ಯತೆ ಹಾಗೂ ಪ್ರವಾಹ ನಿಯಂತ್ರಣಕ್ಕೆ ಸಂಬಂಧಿಸಿದ ತಾಂತ್ರಿಕ ಅಂಶಗಳ ಕುರಿತು ಕೂಲಂಕುಶವಾಗಿ ಪರಿಶೀಲಿಸಿ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ ಮತ್ತು ಕೆರೆಗಳ ಗಡಿ ಗುರುತಿಸಲು ಜಂಟಿ ಸರ್ವೆಗೆ ಸೂಚನೆ – ಯೋಜನೆ ವ್ಯಾಪ್ತಿಯಲ್ಲಿನ ರಾಜಕಾಲುವೆ ಮತ್ತು ಕೆರೆಗಳ ಮೂಲ ಗಡಿಗಳನ್ನು ಕಂದಾಯ ದಾಖಲೆಗಳಿಗೆ ಅನುಗುಣವಾಗಿ ಗುರುತಿಸುವುದು, ಭೂಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣವನ್ನು ನಿಖರವಾಗಿ ಗುರುತಿಸಿ ಗಡಿ ಕಲ್ಲುಗಳನ್ನು ಅಳವಡಿಸುವ ಉದ್ದೇಶದಿಂದ ಸಂಬಂಧಿತ ಇಲಾಖೆಗಳು ಹಾಗೂ ಏಜೆನ್ಸಿಗಳ ಸಹಯೋಗದಲ್ಲಿ ಜಂಟಿ ಸರ್ವೆ ಕೈಗೊಳ್ಳುವಂತೆ ಆಯುಕ್ತರು ನಿರ್ದೇಶನ ನೀಡಿದರು. ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಮುಂದುವರಿಸುವಂತೆ ಸೂಚಿಸಿದರು.

ಬಫರ್ ರಸ್ತೆ ಮತ್ತು ರಾಜಕಾಲುವೆ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ – ಬಫರ್ ರಸ್ತೆಯನ್ನು ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುವುದು, ಅಗತ್ಯವಿರುವ ಕಡೆ ರೈಲ್ವೆ ಮೇಲ್ಸೇತುವೆ ನಿರ್ಮಾಣ, ಎಲಿವೇಟೆಡ್ ಬ್ರಿಡ್ಜ್ ನಿರ್ಮಾಣ, ರಾಜಕಾಲುವೆಗಳ ಮೂಲ ಅಗಲವನ್ನು ಸಂರಕ್ಷಿಸುವುದು, ರಿಟೈನಿಂಗ್ ವಾಲ್ ನಿರ್ಮಾಣ ಹಾಗೂ ನಗರ ಪ್ರವಾಹ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ತಾಂತ್ರಿಕ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದರು.

ಸಮನ್ವಯದೊಂದಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ – ಬೆಂಗಳೂರು ಜಲ ಮಂಡಳಿ, ಗೇಲ್ ಇಂಡಿಯಾ, ಕಂದಾಯ ಇಲಾಖೆ, ಭೂಮಾಪನ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸುವ ಮೂಲಕ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಅಡೆತಡೆಗಳಿಲ್ಲದೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸುವ ಸಲುವಾಗಿ ಸಮನ್ವಯದೊಂದಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸ್ಥಳ ಪರಿಶೀಲನೆ ವೇಳೆ ಅಪರ ಆಯುಕ್ತರು (ಅಭಿವೃದ್ಧಿ) ಲೊಖಂಡೆ ಸ್ನೇಹಲ್ ಸುಧಾಕರ್, ಡಾ. ಬಿ.ಎಸ್. ಪ್ರಹ್ಲಾದ್, ತಾಂತ್ರಿಕ ನಿರ್ದೇಶಕರು, (ಬಿ-ಸ್ಮೈಲ್), ಭೂಪ್ರದ, ಕಾರ್ಯಪಾಲಕ ಅಭಿಯಂತರರು (ಎಸ್‌.ಡಬ್ಲ್ಯೂ.ಡಿ). ಅಮೃತಾ ಸಾಯಿ, ಕಾರ್ಯಪಾಲಕ ಅಭಿಯಂತರರು (ಬಿ-ಸ್ಟೈಲ್), ದೇವರಾಜ, ಸಹಾಯಕ ಕಾರ್ಯಪಾಲಕ ಅಭಿಯಂತರರು (ಬಿ-ಸ್ಟೈಲ್), ನಾಗಾಂಜನೇಯ, ಸಹಾಯಕ ನಿರ್ದೇಶಕರು (ಭೂ ದಾಖಲೆಗಳು), ಸಂದೇಶ್ ಶೆಟ್ಟಿ ಸಹಾಯಕ ಕಾರ್ಯಪಾಲಕ ಅಭಿಯಂತರರು (ಟಿಡಿಆರ್) ಹಾಗೂ ಚಂದ್ರಶೇಖರ್ ನಾಯಕ್, ಸಹಾಯಕ ಅಭಿಯಂತರರು, (ಟಿಡಿಆರ್ )ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ : ವಯನಾಡು ಬೆಟ್ಟ ಕುಸಿತ; 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಬೆಟ್ಟ, ಬಂಡೆಗಳ ತೆರವು..!

Related posts

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ, ಪ್ರತಿಭಟನೆ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ..!

Kalpana Editor

ಸುಲಭ ರೀತಿಯಲ್ಲಿ ಹೋಟೆಲ್ ಶೈಲಿಯ ಮೇಥಿ ಪನ್ನೀರ್ ಕರಿ

Kalpana Editor

ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ : ಈಶ್ವರ ಖಂಡ್ರೆ

Kalpana Editor