24.4 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ..!

ಬೆಂಗಳೂರು : ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.

ವಿಧಾನ ಪರಿಷತ್ ನೂತನ ಸದಸ್ಯೆ ಶ್ರೀಮತಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯ ಎಸ್ ರವಿ , ಐವನ್ ಡಿ’ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ : ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ; ಹೊರಟ್ಟಿ ಸ್ಪಷ್ಟನೆ..!

Related posts

ಕಾವೇರಿ/ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ; 105 ಅಡಿಗೆ ತಲುಪಿದ ನೀರಿನ ಮಟ್ಟ

kknewskannada1987@gmail.com

ಇನ್ಮುಂದೆ ತಿರುಪತಿಯಲ್ಲಿ ಭಕ್ತರಿಗೆ ನಿಂತಲ್ಲೇ ಬರುತ್ತೆ ಪ್ರಸಾದ..!

kknewskannada1987@gmail.com

ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ; ಸಚಿವ ಈಶ್ವರ ಖಂಡ್ರೆ

Kalpana Editor