25.6 C
ಬೆಂಗಳೂರು
August 25, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ ಕಾರ್ಯಕರ್ತರ ಅಸಮಾಧಾನ ಹೆಚ್ಚಿದೆ ಎಂದು ಹೇಳಿದ್ದಾರೆ.

ಇದೇ ಹಿನ್ನೆಲೆಯಲ್ಲಿ, ಈಗಿನ ಸರ್ಕಾರವು ಮತದಾರರಿಗೆ “ನಮ್ಮ ಪಕ್ಷಕ್ಕೆ ಮತ ಹಾಕಿದರೆ 50 ಕೋಟಿ, 100 ಕೋಟಿ ಅನುದಾನ ಕೊಡುತ್ತೇವೆ” ಎಂದು ಆಮಿಷ ಒಡ್ಡಿರುವುದು ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೆಲ ಶಾಸಕರು ಅನುದಾನದ ಆಮಿಷಕ್ಕೆ ಒಳಗಾಗಿ ಚಂಚಲ ಮನಸ್ಸು ಮಾಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಅಡ್ಡಮತದಾನದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಯಾವುದೇ ವಿಶ್ವಾಸ ಕೊರತೆ ಉಂಟಾಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಇದು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು 2017ರ ರಾಜ್ಯಸಭಾ ಚುನಾವಣೆಯ ಉದಾಹರಣೆ ನೀಡಿ ವಿವರಿಸಿದರು. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಸೃಷ್ಟಿಸಲು ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ. ಅಡ್ಡಮತದಾನದ ಬಗ್ಗೆ ಬಿಜೆಪಿ ಹೈಕಮಾಂಡ್​​ಗೆ ಮಾಹಿತಿ ನೀಡಲು ದೆಹಲಿಗೆ ತೆರಳುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ : ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಹೊಸ ಪ್ರಜಾಸೇವೆ ಇಲಾಖೆ ಸ್ಥಾಪನೆ – ಡಿಕೆಶಿ

Related posts

ದೀಪಾವಳಿಗೆ ದೊಡ್ಡ ಕ್ಲ್ಯಾಶ್; ‘ಜೈಲರ್ 2’ vs ‘ರಾಮಾಯಣ’, ರೇಸ್‌ನಲ್ಲಿ ಭಾಗಿ..!

Kalpana Editor

ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

kknewskannada1987@gmail.com

ನಿರ್ಮಾಣ ಹಂತದ ಸೇತುವೆ ಕುಸಿದು ಕಾರ್ಮಿಕರು ಸಾವು; ಅವಶೇಷಗಳ ಅಡಿಯಲ್ಲಿ ಲಾಕ್‌..!

Kalpana Editor