July 14, 2026
kranthikidi.com
ತಾಜಾಸುದ್ದಿರಾಜ್ಯ

ಹನುಮಂತಪ್ಪ ಅವರ ಕೆಲಸ, ಆಚಾರ ವಿಚಾರ ಶಾಶ್ವತವಾಗಿ ಉಳಿಯಲಿದೆ – ಸಿಎಂ ಡಿ ಕೆ ಶಿವಕುಮಾರ್

ಚಿತ್ರದುರ್ಗ : “ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ, “1979ರಿಂದ ನಾನು ಹೆಚ್ ಹನುಮಂತಪ್ಪ ಅವರ ಜೊತೆ ಒಡನಾಟ ಇಟ್ಟುಕೊಂಡಿದ್ದೆ. ನಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಅಕ್ಕಪಕ್ಕದ ರೂಮ್ ಗಳಲ್ಲೇ ಇದ್ದೆವು. ರಾಜಗೋಪಾಲ್, ಜಾಫರ್ ಷರೀಫ್ ಅವರು ನಮ್ಮ ಜಿಲ್ಲೆಯಿಂದಲೇ ರಾಜಕಾರಣ ಮಾಡಿದರು. ಹನುಮಂತಪ್ಪ ಅವರಿಗೆ ಎಲ್ಲಾ ವರ್ಗದ ಜನರ ಬಗ್ಗೆ ಕಾಳಜಿ ಇತ್ತು. ಇಂದು ಅವರ ದೇಹಕ್ಕೆ ಸಾವು ಬಂದಿರಬಹುದು. ಅವರ ಆಚಾರ ವಿಚಾರ, ಭಾವನೆಗಳು ಜೀವಂತವಾಗಿರುತ್ತವೆ. ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಮಾರ್ಗದರ್ಶನ ನೀಡಿದ್ದರು.

ಚಿತ್ರದುರ್ಗದ ಕೃಷಿ ಹಾಗೂ ನೀರಾವರಿಯ ಅನೇಕ ಯೋಜನೆಗಳಿಗೆ ಹೋರಾಟ ಮಾಡಿದವರು” ಎಂದು ಸ್ಮರಿಸಿದರು. “ಅವರು ನಮ್ಮ ಆತ್ಮೀಯ ನಾಯಕರಾಗಿದ್ದು ಅವರಿಗೆ ಗೌರವ ಸಲ್ಲಿಸಿದ್ದೇವೆ. ಸರಳ ಜೀವನ ನಡೆಸಿದ್ದರು. ಕಾಂಗ್ರೆಸ್ ಪಕ್ಷದ ಕಟ್ಟಡ ನಿರ್ಮಾಣ ಮಾಡಬೇಕು ಎಂಬ ಹೆಜ್ಜೆ ಇಟ್ಟವರು ಹನುಮಂತಪ್ಪನವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜಕಾರಣದಲ್ಲಿ ಬೇಕಾದಷ್ಟು ನಾಯಕರಿಗೆ ನೆರವು ನೀಡಿದ್ದಾರೆ” ಎಂದರು.

ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ತರುವ ವಿಚಾರವಾಗಿ ಹನುಮಂತಪ್ಪ ಅವರು ಹೋರಾಟ ಮಾಡಿದ್ದರು ಎಂದು ಕೇಳಿದಾಗ, “ಕೇವಲ ಭದ್ರಾ ಮೇಲ್ದಂಡೆ ಯೋಜನೆ ಮಾತ್ರವಲ್ಲ. ಅನೇಕ ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ, ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಅವರು ಜಿಲ್ಲೆಯಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಿದ್ದಾರೆ” ಎಂದು ತಿಳಿಸಿದರು.

ಬರ ಪರಿಸ್ಥಿತಿ ಎದುರಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಕಂದಾಯ ಸಚಿವರಾಗಿರುವ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡುತ್ತೇನೆ. ಬೆಂಗಳೂರು ವಿಭಾಗ ಮಟ್ಟದ ಸಭೆ ಯಾವಾಗ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು. ಇದನ್ನೂ ಓದಿ : ಬಿಡದಿ ಟೌನ್‌ಶಿಪ್ ಸರ್ವೆಗೆ ಬಂದವರಿಗೆ ಪೊರಕೆ ಪೂಜೆ, ಸ್ಥಳದಲ್ಲಿ ಉದ್ವಿಗ್ನತೆ – ಅಧಿಕಾರಿಗಳ ವಾಹನಕ್ಕೆ ಹಾನಿ, ರೈತರ ಆಕ್ರೋಶ..!

Related posts

ದಸರಾದಲ್ಲಿ ಕಂಬಳಕ್ಕೆ ಭಾರಿ ವಿರೋಧ; ಯದುವೀರ್ ಆಕ್ಷೇಪ ಬೆನ್ನಲ್ಲೇ ಹೆಚ್‌ಡಿಕೆ ವಾಗ್ದಾಳಿ..!

Kalpana Editor

ಶಿಕ್ಷಕರ ಕಿರುಕುಳ ಆರೋಪ; 4ನೇ ಮಹಡಿಯಿಂದ ಬಿದ್ದು, ವಿದ್ಯಾರ್ಥಿ ಆತ್ಮಹತ್ಯೆ..!

Kalpana Editor

ಹೆಚ್‌ಡಿ ದೇವೇಗೌಡರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

Kalpana Editor