August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ವಿರುದ್ಧ ಎಫ್‌ಐಆರ್..!

ಕಲಬುರಗಿ : ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಜಗರ್, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ರೆವೂರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇತ್ತೀಚೆಗೆ ಆಳಂದ ಲಾಡ್ಲೆ ಮಶಾಕ್ ಗಲಾಟೆ ಕೇಸ್ ವಾಪಸ್ ಪಡೆದ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ದತ್ತಾತ್ರೇಯ ಪಾಟೀಲ್ ರೇವೂರ್, ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಕಲಬುರಗಿಯನ್ನು ಮಿನಿ ಪಾಕಿಸ್ತಾನ ಮಾಡಲು ಮುಂದಾಗಿದ್ದರು. ಹಾಗಾಗಿಯೆ ಚುನಾವಣೆಯಲ್ಲಿ ಖಮರುಲ್ ಇಸ್ಲಾಂ ಸೋಲನ್ನ ಅನುಭವಿಸಿದ್ದರು ಎಂದು ಹೇಳಿದ್ದರು. ಈ ಸಂಬಂಧ ಮಾಜಿ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ : ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

Related posts

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ; ಸಸಿ ನೆಡುವ ಬೃಹತ್ ಅಭಿಯಾನ..!

Kalpana Editor

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್

Kalpana Editor

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ..!

Kalpana Editor