July 22, 2026
kranthikidi.com
ತಾಜಾಸುದ್ದಿರಾಜ್ಯ

ರಾಜ್ಯದಲ್ಲಿ ವೈರಾಣು ಜ್ವರ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹೈ ಅಲರ್ಟ್..!

ರಾಜ್ಯದಲ್ಲಿ ಕಾಲೋಚಿತ ವೈರಾಣು ಜ್ವರ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಯು.ಟಿ. ಖಾದರ್ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಾಗಿದೆ.

ಜಿಲ್ಲಾವಾರು ವೈರಲ್ ಜ್ವರ ಹಾಗೂ ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ ಪರಿಶೀಲನೆ ಮಾಡಿ, ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ವಿಮರ್ಶೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸನ್ನದ್ಧತೆ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.

ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಸೇರಿದಂತೆ ಮಳೆಗಾಲದ ಸೋಂಕುಗಳ ಮೇಲೆ ವಿಶೇಷ ನಿಗಾವಹಿಸಬೇಕು. ಜ್ವರದ ಪ್ರಕರಣಗಳ ತ್ವರಿತ ಪತ್ತೆ, ಪರೀಕ್ಷೆ ಹಾಗೂ ಚಿಕಿತ್ಸೆಗೆ ಸೂಚನೆ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ಔಷಧಿ, ಪರೀಕ್ಷಾ ಕಿಟ್ ಹಾಗೂ ವೈದ್ಯಕೀಯ ಸಾಮಗ್ರಿಗಳ ಸಮರ್ಪಕ ಸಂಗ್ರಹಕ್ಕೆ ನಿರ್ದೇಶಿಸಲಾಗಿದೆ.

ಸಾರ್ವಜನಿಕರಲ್ಲಿ ಸ್ವಚ್ಛತೆ ಹಾಗೂ ಆರೋಗ್ಯ ಜಾಗೃತಿ ಮೂಡಿಸಲು ಸೂಚನೆ ನೀಡಿ, ಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಯನ್ನು ಸಕ್ರಿಯವಾಗಿ ಬಳಸಿಕೊಳ್ಳಲು ನಿರ್ದೇಶನ ಮಾಡಿ, ಯಾವುದೇ ಜಿಲ್ಲೆಯಲ್ಲಿ ಸೋಂಕು ಹೆಚ್ಚಾದರೆ ತಕ್ಷಣ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರತಿದಿನ ಸೋಂಕಿನ ಮಾಹಿತಿಯನ್ನು ರಾಜ್ಯ ಮಟ್ಟಕ್ಕೆ ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ಮಾಡಿದೆ. ಇದನ್ನೂ ಓದಿ : ಉಪವಾಸ ಸತ್ಯಾಗ್ರಹ ಹಿಂಪಡೆಯಲು, ಷರತ್ತುಗಳನ್ನು ವಿಧಿಸಿದ ಸೋನಮ್ ವಾಂಗ್ಚುಕ್

Related posts

ಅಸ್ಸಾಂನಲ್ಲಿ ಭೀಕರ ಪ್ರವಾಹ; ಜನರಿಗೆ ಸಂಕಷ್ಟ, ರೈಲು ಸಂಚಾರ ಸ್ಥಗಿತ…!

Kalpana Editor

ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ; ಸಚಿವ ಈಶ್ವರ ಖಂಡ್ರೆ

Kalpana Editor

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

Kalpana Editor